Home namma chikmagalur chikamagalur ಹಿಟ್‌ ಆ್ಯಂಡ್‌ ರನ್‌-ಸವಾರ ಸಾವು
chikamagalurHomeLatest Newsnamma chikmagalur

ಹಿಟ್‌ ಆ್ಯಂಡ್‌ ರನ್‌-ಸವಾರ ಸಾವು

Share
Share

ಕಡೂರು: ಹಿಂಬದಿಯಿಂದ ಬಂದ ಅಪರಿಚಿತ ಗೂಡ್ಸ್ ವಾಹನದ ಚಾಲಕನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ, ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಡೂರು ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಕೆಗ್ಗೇರಿ ಏರಿಯಾದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಚಿಕ್ಕಂಗಳ ಗ್ರಾಮದ ಮೂಲದವರಾದ, ಪ್ರಸ್ತುತ ಕಡೂರು ಪಟ್ಟಣದಲ್ಲಿ ವಾಸವಾಗಿದ್ದ ಕೇಶವಮೂರ್ತಿ (53) ಮೃತಪಟ್ಟವರು.

ಅ.25ರಂದು ರಾತ್ರಿ ಸುಮಾರು 9.15ರ ವೇಳೆಗೆ ಕೇಶವಮೂರ್ತಿ ಅವರು ತಮ್ಮ ಬೈಕ್‌ನಲ್ಲಿ (ಕೆಎ-01-ಇಎಸ್-8561) ಚಿಕ್ಕಂಗಳ ಗ್ರಾಮದ ಕೆಗ್ಗೇರಿ ಏರಿಯಾ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ಗೂಡ್ಸ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕೇಶವಮೂರ್ತಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅದೇ ಮಾರ್ಗವಾಗಿ ತೆರಳುತ್ತಿದ್ದ ಚಿಕ್ಕಂಗಳ ಗ್ರಾಮದ ಸಗುನಪ್ಪ ಹಾಗೂ ಇತರರು ರಸ್ತೆಯಲ್ಲಿ ಬಿದ್ದಿದ್ದ ಕೇಶವಮೂರ್ತಿ ಅವರನ್ನು ಗಮನಿಸಿ ನೆರವಿಗೆ ಧಾವಿಸಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ತಲೆಗೆ ಹಾಗೂ ಎದೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಕೇಶವಮೂರ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮೃತರ ಪರಿಚಯಸ್ಥ ಹನುಮಂತಪ್ಪ ಕೆ. ಅವರು ಅ.26ರಂದು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಘಾತಕ್ಕೆ ಕಾರಣವಾಗಿ ಸ್ಥಳದಿಂದ ಪರಾರಿಯಾದ ಗೂಡ್ಸ್ ವಾಹನದ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ.

ದೂರಿನ ಆಧಾರದ ಮೇಲೆ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Hit-and-run: Rider dies

Share

Leave a comment

Leave a Reply

Your email address will not be published. Required fields are marked *

Don't Miss

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು ಹೋಬಳಿ ಬಿಸಿಲೆರೆ ಸಮೀಪದ ಅರೇಹಳ್ಳಿ ಗ್ರಾಮದ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆಯಾಗಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿದ್ದರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಸಿ.ಎಸ್. ಯೋಗೀಶ್ ಮೃತ ದುರ್ದೈವಿ....

Related Articles

ಮಕ್ಕಳ ಲೈಂಗಿಕ ಶೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ – ಪ್ರಕರಣ ದಾಖಲು

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಮಗು ಮತ್ತು ವಯಸ್ಕರು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ...

ಚಿಕ್ಕಮಗಳೂರಿನಲ್ಲಿ ಕ್ರೈಸ್ತ ಸಮುದಾಯದ ಬೃಹತ್ ಫಲಾನುಭವಿ ಸಮಾವೇಶ

ಚಿಕ್ಕಮಗಳೂರು: ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಅಕ್ಟೋಬರ್ 28ರಂದು ಚಿಕ್ಕಮಗಳೂರು ನಗರದಲ್ಲಿ ಕ್ರೈಸ್ತ...

ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿಯಿಂದ 85,769 ಹೆಸರು ಹೊರಕ್ಕೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಮಂಗಳವಾರ...

ಚಿಕ್ಕಮಗಳೂರಿನಲ್ಲಿ 1.98 ಕೋಟಿ ವೆಚ್ಚದಲ್ಲಿ ಮೀಡಿಯನ್ ಲೈಟ್ ಅಳವಡಿಕೆ

ಚಿಕ್ಕಮಗಳೂರು: ನಗರದ ಪ್ರಮುಖ ರಸ್ತೆಯೊಂದರಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದೆ ಸಂಭವಿಸುತ್ತಿದ್ದ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ...