Home namma chikmagalur chikamagalur ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
chikamagalurCrime NewsHomeLatest Newsnamma chikmagalur

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Share
Share

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಇಬ್ಬರು ಬಾಲಕಿಯರು ಗರ್ಭಿಣಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಲಿಂಗದಹಳ್ಳಿ ಹಾಗೂ ಮಹಿಳಾ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿವೆ.

ಮೊದಲ ಪ್ರಕರಣದಲ್ಲಿ, ಬೆಂಗಳೂರಿನಲ್ಲಿ ಪೋಷಕರೊಂದಿಗೆ ವಾಸವಾಗಿದ್ದ 17 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿರುವ ಆರೋಪ ಕೇಳಿಬಂದಿದೆ. ಬಾಲಕಿ ಶಾಂತಿನಗರದ ಬಿಬಿಎಂಪಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿದ್ದಳು ಎನ್ನಲಾಗಿದೆ.

ಬಾಲಕಿಯ ತಾಯಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬೈರಾಪುರ ಗ್ರಾಮದವರಾಗಿದ್ದು, ಅಲ್ಲಿರುವ ತಮ್ಮ ತಾಯಿಗೆ ಸೇರಿದ ಸುಮಾರು 9 ಎಕರೆ ಜಮೀನಿನಲ್ಲಿ 2026ರ ಫೆಬ್ರವರಿಯಲ್ಲಿ ಜೋಳದ ಒಕ್ಕಣೆ ಕೆಲಸ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯನ್ನು ಅಜ್ಜಿ ಪಾರ್ವತಿಬಾಯಿ ಬೆಂಗಳೂರಿನಿಂದ ಬೈರಾಪುರ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದರು.

ಈ ಸಂದರ್ಭದಲ್ಲಿ ಜಮೀನಿನ ಕೆಲಸಕ್ಕೆ ಬರುತ್ತಿದ್ದ ಹನುಮಂತು ಅಲಿಯಾಸ್ ಅರುಣ್ ಎಂಬಾತ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡು, ಪ್ರೀತಿಸುತ್ತಿರುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಬಳಿಕ ಇಬ್ಬರೂ ಮೊಬೈಲ್ ಮೂಲಕ ನಿರಂತರವಾಗಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ಒಂದು ದಿನ ಬಾಲಕಿ ಜಮೀನಿಗೆ ಊಟ ತೆಗೆದುಕೊಂಡು ಹೋಗಿದ್ದಾಗ ಹೊಲದಲ್ಲಿದ್ದ ಗುಡಿಸಲಿಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಹೇಳಿ, ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ ಎಂದು ಬಾಲಕಿ ತಾಯಿಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಕೆಲವು ತಿಂಗಳುಗಳಿಂದ ಬಾಲಕಿಗೆ ಮುಟ್ಟಾಗದ ಹಿನ್ನೆಲೆಯಲ್ಲಿ ತಾಯಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿಯೇ ಗರ್ಭಧಾರಣೆ ಪರೀಕ್ಷೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ಸಂಬಂಧ ತಾಯಿ ಅಕ್ಟೋಬರ್ 26ರಂದು ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿ, ಭಾರತೀಯ ನ್ಯಾಯ ಸಂಹಿತೆಯ ಕಲಂ 64(1) ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 5(ಜೆ)(2), 6ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಘಟನೆ ನಡೆದ ಸ್ಥಳ ಬೈರಾಪುರ ಗ್ರಾಮವಾಗಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಅಕ್ಟೋಬರ್ 29ರಂದು ಪ್ರಕರಣದ ಕಡತವನ್ನು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇದೀಗ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಚಿಕ್ಕಮಗಳೂರು ತಾಲ್ಲೂಕಿನ ರಾಂಪುರ ಗ್ರಾಮದ ಉಮೇಶ್ (28) ಎಂಬಾತ ಸಂಬಂಧದಲ್ಲಿ ಮಾವನ ಮಗನಾಗುವ 17 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಆರೋಪ ಕೇಳಿಬಂದಿದೆ.

ಬಾಲಕಿ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿ ಬಳಿಕ ಶಿಕ್ಷಣ ಮೊಟಕುಗೊಳಿಸಿದ್ದಳು. ಕಳೆದ ಒಂದು ವರ್ಷದಿಂದ ಉಮೇಶ್‌ನನ್ನು ಪ್ರೀತಿಸುತ್ತಿದ್ದುದಾಗಿ ಬಾಲಕಿ ಹೇಳಿಕೊಂಡಿದ್ದಾಳೆ ಎನ್ನಲಾಗಿದೆ.

ಮೇ 28, 2026ರಂದು ಚಿಕ್ಕಮಗಳೂರು ನಗರದ ಸಾಲುಮರದಮ್ಮ ದೇವಸ್ಥಾನದಲ್ಲಿ ಇಬ್ಬರೂ ವಿವಾಹವಾಗಿರುವುದಾಗಿ ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ಈ ವಿಚಾರ ಎರಡೂ ಕುಟುಂಬಗಳಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ವಿವಾಹದ ಬಳಿಕ ಅದೇ ದಿನ ರಾತ್ರಿ ಉಮೇಶ್ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.

ನಂತರ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಾಗ ವಿವಾಹದ ವಿಚಾರ ಪೋಷಕರಿಗೆ ಗೊತ್ತಾಗಿದೆ. ಈ ಕುರಿತು ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಕರೆದೊಯ್ದಿದ್ದರು. ಬಳಿಕ ಚಿಕ್ಕಮಗಳೂರು ಹೆರಿಗೆ ಆಸ್ಪತ್ರೆಯ ಸಖಿ ಕೇಂದ್ರದಲ್ಲಿ ತಾಯಿ ಮಂಜುಳಾ ಅವರ ಸಮಕ್ಷಮ ಬಾಲಕಿಯಿಂದ ಹೇಳಿಕೆ ಪಡೆಯಲಾಗಿದೆ.

ಅಕ್ಟೋಬರ್ 29ರಂದು ರಾತ್ರಿ 8.45ಕ್ಕೆ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಹೇಮಾ ಅವರು ಬಾಲಕಿಯ ಹೇಳಿಕೆ ಪಡೆದು ಠಾಣೆಗೆ ಹಾಜರುಪಡಿಸಿದ್ದು, ಹೇಳಿಕೆಯ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ನಡೆದಿರುವ ಈ ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Allegations of sexual abuse of minor girls

Share

Leave a comment

Leave a Reply

Your email address will not be published. Required fields are marked *

Don't Miss

ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಫಿ ಮತ್ತು ಟೀ ಪ್ಲಾಂಟೇಷನ್‌ಗಳಲ್ಲಿ ದುಡಿಯುವ ಕಾರ್ಮಿಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‌ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಒಪ್ಪಂದಕ್ಕೆ...

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ತಿಳಿಸಿದರು. ನಗರದ...

Related Articles

ದಲಿತರಿಗೆ ಮೀಸಲಿಟ್ಟ ಭೂಮಿ ಮಂಜೂರಾತಿಗೆ ಆಗ್ರಹ

ಚಿಕ್ಕಮಗಳೂರು: ದಲಿತರಿಗೆ ಮೀಸಲಿಟ್ಟಿರುವ ಸರ್ಕಾರಿ ಭೂಮಿಯನ್ನು ಭೂಹೀನ ದಲಿತರಿಗೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...

ಕ್ರೀಡಾ ಸಾಧಕರಿಗೆ ಕಾಫಿನಾಡಿನಲ್ಲಿ ಇಂದು ಅದ್ಧೂರಿ ಗೌರವ

ಚಿಕ್ಕಮಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿರುವ ಪ್ಯಾರಾ ಕ್ರೀಡಾಪಟುಗಳನ್ನು ಗೌರವಿಸುವ ಉದ್ದೇಶದಿಂದ...

ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಮಗಳೂರಿನ ಇಬ್ಬರು ಸಾಧಕರು ಭಾಜನ

ಉದ್ಯಮ ಕ್ಷೇತ್ರದಲ್ಲಿ ಎಂ.ಬಿ. ಜಯಶಂಕರ್, ವಚನ ಹಾಗೂ ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ಚಟ್ನಳ್ಳಿ ಮಹೇಶ್‌ಗೆ ಗೌರವ...

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ...