Home namma chikmagalur chikamagalur ಕಾರು ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು
chikamagalurHomeLatest Newsnamma chikmagalur

ಕಾರು ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Share
Share

ಕಡೂರು: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿ ಕೆರೆಯ ಕೋಡಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಹರಿಸಮುದ್ರ ಗ್ರಾಮದ ಮಲ್ಲಿಕಾರ್ಜುನ ಮೃತಪಟ್ಟವರು. ಅ.30ರಂದು ರಾತ್ರಿ 9.30ರ ಸುಮಾರಿಗೆ ಮಲ್ಲಿಕಾರ್ಜುನ ಅವರು ಕೆಎ 66 ಎಲ್ 2653 ಸಂಖ್ಯೆಯ ಬೈಕ್‌ನಲ್ಲಿ ಯಗಟಿಯಿಂದ ಹರಿಸಮುದ್ರ ಗ್ರಾಮಕ್ಕೆ ತೆರಳುತ್ತಿದ್ದಾಗ, ಯಗಟಿ ಕೆರೆಯ ಕೋಡಿ ಬಳಿ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಬದಿಯ ಸಿಮೆಂಟ್ ಕಂಬಗಳಿಗೆ ಅಪ್ಪಳಿಸಿ ಮಲ್ಲಿಕಾರ್ಜುನ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ಕಾರು ಹಾಗೂ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Bike rider dies on the spot after being hit by a car

Share

Leave a comment

Leave a Reply

Your email address will not be published. Required fields are marked *

Don't Miss

ಶಾಶ್ವತ ಕುಡಿಯುವ ನೀರಿನ ಸೌಲಭ್ಯಕ್ಕೆ ರಾಜ್ಯ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಅಜ್ಜಂಪುರ ತಾಲ್ಲೂಕಿನ ಬರಗಾಲ ಪೀಡಿತ ಸಿದ್ದಲಿಪುರ, ಕೆಂಚಾಪುರ, ಅತ್ತಿಗಟ್ಟೆ, ಮಾಕನಹಳ್ಳಿ ಹಾಗೂ ಜಲದಿಹಳ್ಳಿ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಭದ್ರಾ ಮೇಲ್ದಂಡೆ ಹಾಗೂ ಉಬ್ರಾಣಿ ಏತ ನೀರಾವರಿ...

ಶಾಂತವೇರಿ ಘಾಟಿಯಲ್ಲಿ ಕ್ಯಾಂಟರ್‌ಗೆ ಬೆಂಕಿ

ತರೀಕೆರೆ: ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ....

Related Articles

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಣೆ

ಚಿಕ್ಕಮಗಳೂರು: ದೀಪಾವಳಿ ಹಬ್ಬ, ವರ್ಷಾಂತ್ಯದ ರಜೆಗಳು ಹಾಗೂ ಚಳಿಗಾಲದ ಪ್ರವಾಸದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು...

ಮನೆಯಲ್ಲಿ ಅಪ್ಪ, ಅಮ್ಮ-ಗಂಡ ಇದ್ದರೂ ಬೀದಿಪಾಲಾದ ಮಹಿಳೆ

ಚಿಕ್ಕಮಗಳೂರು; ಮನೆಯಲ್ಲಿ ತಂದೆ, ತಾಯಿ, ಗಂಡ ಹಾಗೂ ಮಗ ಇದ್ದರೂ ಮಾನಸಿಕ ಅಸ್ವಸ್ಥತೆಯಿಂದಾಗಿ 38 ವರ್ಷದ...

ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನಿಗಧಿಗೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕಬ್ಬು ಬೆಳೆಗಾರರಿಗೆ ನಿಗಧಿತ ಬೆಲೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು...

ವಕೀಲರ ರಕ್ಷಣೆಗೆ ಆಗ್ರಹ: ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರು, ನ.3: ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಹಾಗೂ ಮಾರಣಾಂತಿಕ ದಾಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ...