Home namma chikmagalur chikamagalur ಗುಂಡು ಹಾರಿಸಿ ಹಲ್ಲೆ – ಚಿಕಿತ್ಸೆ ಫಲಿಸದೆ ಯುವಕ ಸಾವು
chikamagalurCrime NewsHomeLatest Newsnamma chikmagalur

ಗುಂಡು ಹಾರಿಸಿ ಹಲ್ಲೆ – ಚಿಕಿತ್ಸೆ ಫಲಿಸದೆ ಯುವಕ ಸಾವು

Share
Share

ಮೂಡಿಗೆರೆ: ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿ ಏರ್‌ಗನ್‌ನಿಂದ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ ಎಂದು ಆರೋಪಿಸಲಾಗಿರುವ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಗೌರಿಕೆರೆ ಗ್ರಾಮದ ನವೀನ್ (ಮೃತ) ಎಂಬಾತನನ್ನು ಅ.28ರಂದು ಸಂಜೆ ಗೌರಿಕೆರೆ ಗ್ರಾಮದ ಕೆರೆ ಸಮೀಪದಿಂದ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿ ಗುಂಡು ಹಾರಿಸಲಾಗಿದೆ ಎಂದು ತಂದೆ ಕುಮಾರ್ ಮೂಡಿಗೆರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಗಾಯಗೊಂಡಿದ್ದ ನವೀನ್‌ನನ್ನು ಮೂಡಿಗೆರೆ, ಹಾಸನ ಹಾಗೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.3ರಂದು ಸಂಜೆ 6ರಿಂದ 6.30ರ ನಡುವೆ ಮೃತಪಟ್ಟಿದ್ದಾನೆ.

ಆಸ್ಪತ್ರೆಯಲ್ಲಿ ತಂದೆಯೊಂದಿಗೆ ಮಾತನಾಡಿದ್ದ ನವೀನ್, ಚೇತನ್, ಭರತ್, ಪ್ರಿತಂ ಹಾಗೂ ಆನಂದ ಎಂಬ ನಾಲ್ವರು ತನ್ನ ಮೇಲೆ ಹಲ್ಲೆ ನಡೆಸಿ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೊ.ಸಂ.179/2026ರಂತೆ ಭಾರತೀಯ ನ್ಯಾಯ ಸಂಹಿತೆ ಕಲಂ 103(1) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 3, 25ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Attack involving gunfire – Youth dies after treatment fails

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರಿನಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಆಶ್ರಯದಲ್ಲಿ ಬುಧವಾರ ನಗರದಲ್ಲಿ ನಡೆದ ವಿಜಯದಶಮಿ ಪಥಸಂಚಲನವು ಸಾರ್ವಜನಿಕರ ಗಮನ ಸೆಳೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಗಣವೇಷಧಾರಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕುತ್ತಿದ್ದರೆ, ರಸ್ತೆಯ ಎರಡೂ...

ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸುವ ಹಾಗೂ ಸುಳ್ಳು ಸುದ್ದಿಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ...

Related Articles

ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಸೌಲಭ್ಯಗಳನ್ನು ನೀಡುತ್ತಿರುವುದಾಗಿ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ...

ಕೊರಿಯರ್‌ನಲ್ಲಿ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ₹2.05 ಲಕ್ಷ ವಂಚನೆ

ಚಿಕ್ಕಮಗಳೂರು: ವಿದೇಶದಿಂದ ಕೊರಿಯರ್ ಮೂಲಕ ಗಿಫ್ಟ್ ಹಾಗೂ ಹಣ ಕಳುಹಿಸುವುದಾಗಿ ನಂಬಿಸಿ ವಿವಿಧ ಶುಲ್ಕಗಳ ನೆಪದಲ್ಲಿ...

ಕಾಂಗ್ರೆಸ್ ಮುಖಂಡ ಎಂ.ಎಸ್. ಅನಂತ್ ನಿಧನ

ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಂ.ಎಸ್. ಅನಂತ್ (52 )ಅನಾರೋಗ್ಯದಿಂದ...

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಡಿಪೋ ಮ್ಯಾನೇಜರ್ ಕಿರುಕುಳ: ಸಿಪಿಐ ಮುಖಂಡೆ ರಾಧಾ ಸುಂದರೇಶ್ ಆರೋಪ

ಚಿಕ್ಕಮಗಳೂರು: ನಗರದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಸಿಬ್ಬಂದಿಗೆ ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದು, ಕಾರ್ಮಿಕರ ನ್ಯಾಯಯುತ ರಜೆ...