Home namma chikmagalur chikamagalur ಬೆಟ್ಟದ ತುದಿಯಲ್ಲಿ ಕಬ್ಬಿಣದ ಕಂಬಿ ಮುರಿದು 20ಕ್ಕೂ ಹೆಚ್ಚು ಮಂದಿಗೆ ಗಾಯ
chikamagalurCrime NewsHomeLatest Newsnamma chikmagalur

ಬೆಟ್ಟದ ತುದಿಯಲ್ಲಿ ಕಬ್ಬಿಣದ ಕಂಬಿ ಮುರಿದು 20ಕ್ಕೂ ಹೆಚ್ಚು ಮಂದಿಗೆ ಗಾಯ

Share
Share

ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದೀಪೋತ್ಸವ ಹಾಗೂ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಹರಿದುಬಂದಿದ್ದು, ಭಕ್ತರ ದಟ್ಟಣೆಯ ನಡುವೆ ಬೆಟ್ಟದ ಮೇಲ್ಭಾಗದಲ್ಲಿ ಕಬ್ಬಿಣದ ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟದಲ್ಲಿ ಭಾನುವಾರ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿತ್ತು. ದೇವಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಏರಿ ಬರುತ್ತಿದ್ದ ವೇಳೆ ಬೆಟ್ಟದ ತುದಿಯಲ್ಲಿ ಭದ್ರತೆಗಾಗಿ ಅಳವಡಿಸಲಾಗಿದ್ದ ಕಬ್ಬಿಣದ ಕಂಬಿ ಏಕಾಏಕಿ ಮುರಿದಿದೆ ಎನ್ನಲಾಗಿದೆ.

ಕಂಬಿ ಮುರಿದ ಪರಿಣಾಮ ಅಲ್ಲಿದ್ದ ಭಕ್ತರು ನಿಯಂತ್ರಣ ತಪ್ಪಿ ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಬೆಟ್ಟದ ಮೇಲ್ಭಾಗದಲ್ಲಿ ಗಾಯಗೊಂಡಿದ್ದ ಭಕ್ತರನ್ನು ಸಿಬ್ಬಂದಿ ಹೊತ್ತುಕೊಂಡು ಕೆಳಭಾಗಕ್ಕೆ ಕರೆತಂದು, ಬಳಿಕ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಲಕ್ಷಾಂತರ ಭಕ್ತರು ಆಗಮಿಸಿದ್ದ ಹಿನ್ನೆಲೆಯಲ್ಲಿ ಬೆಟ್ಟದ ಮೇಲ್ಭಾಗದಲ್ಲಿ ಭಾರಿ ಜನದಟ್ಟಣೆ ಉಂಟಾಗಿತ್ತು. ಈ ನಡುವೆ ಕಬ್ಬಿಣದ ಕಂಬಿ ಮುರಿದು ಸಂಭವಿಸಿದ ಅವಘಡ ಭಕ್ತರಲ್ಲಿ ಆತಂಕ ಮೂಡಿಸಿದೆ. ದೇವೀರಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.

Iron rod breaks at the top of a hill; over 20 people injured

Share

Leave a comment

Leave a Reply

Your email address will not be published. Required fields are marked *

Don't Miss

ವಾಹನ ಡಿಕ್ಕಿ ಅಫಘಾತದಲ್ಲಿ ಕಾರ್ಮಿಕ ಸಾವು

ಚಿಕ್ಕಮಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಶ್ರೀಲೇಖಾ ಟಾಕೀಸ್...

ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಮದುವೆ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿ ಸಂಸಾರ ನಡೆಸಿದ ಆರೋಪದಡಿ ಯುವಕನ ವಿರುದ್ಧ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆಲ್ದೂರು ಪೊಲೀಸ್...

Related Articles

ಬಸ್ ಹತ್ತುವ ಮಹಿಳೆಯ 5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಬಸ್ ಹತ್ತುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 5...

ಮಹಿಳೆಯ ಕುತ್ತಿಗೆಯಿಂದ 6 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ಚಿಕ್ಕಮಗಳೂರು: ರಾತ್ರಿ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ...

ರೈತರ ಪರಿಶ್ರಮದಿಂದ ನಮ್ಮೆಲ್ಲರ ಬದುಕು ಸಾಗುತ್ತಿದೆ

ಚಿಕ್ಕಮಗಳೂರು : ರೈತರಿಗೆ ಜಾತಿ, ಧರ್ಮ, ಪಕ್ಷದ ಬೇಧವಿಲ್ಲ. ರೈತ ಎಂದರೆ ರೈತ ಮಾತ್ರ. ರೈತ...

ದೇವೀರಮ್ಮನ ಬೆಟ್ಟ ಏರುವಾಗ ಹೃದಯಾಘಾತದಿಂದ ಭಕ್ತನ ಸಾವು

ಚಿಕ್ಕಮಗಳೂರು: ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕಾಗಿ ಬೆಟ್ಟ ಏರುತ್ತಿದ್ದ ಭಕ್ತರೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ...