Home Crime News ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು
Crime NewsHomeLatest Newsnamma chikmagalurTarikere

ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು

Share
Share

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳು ಬೈಕ್ ಅಪಘಾತಕ್ಕೀಡಾಗಿ, ಮಗಳು ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ.

ಲಿಂಗದಹಳ್ಳಿ ಸಮೀಪದ ಶಾಂತಿನಗರ ನಿವಾಸಿಗಳಾದ ದ್ರಾಕ್ಷಾಯಿಣಿ (20) ಮೃತಪಟ್ಟ ದುರ್ದೈವಿ. ಅವರ ತಂದೆ ರಮೇಶ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಂದೆ ರಮೇಶ್ ಹಾಗೂ ಮಗಳು ದ್ರಾಕ್ಷಾಯಿಣಿ ಅವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮಣ್ಣಿನ ಗುಡ್ಡೆಗೆ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ತಂದೆ-ಮಗಳು ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ದ್ರಾಕ್ಷಾಯಿಣಿ ಮೃತಪಟ್ಟಿದ್ದಾರೆ. ತಂದೆ ರಮೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಸಂತೋಷದಿಂದ ತೆರಳುತ್ತಿದ್ದ ಕುಟುಂಬದಲ್ಲಿ ಈ ದುರ್ಘಟನೆ ಸೂತಕದ ಛಾಯೆ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Young woman dies in accident while traveling to relatives’ house for Deepavali

Share

Leave a comment

Leave a Reply

Your email address will not be published. Required fields are marked *

Don't Miss

ವಕೀಲರ ರಕ್ಷಣೆಗೆ ಆಗ್ರಹ: ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರು, ನ.3: ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಹಾಗೂ ಮಾರಣಾಂತಿಕ ದಾಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ಹಲ್ಲೆ ನಡೆಸುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು...

ಹಳೆಯ ದ್ವೇಷಕ್ಕೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಹಳೆಯ ಗಲಾಟೆ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬಿದಿರಿನ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಗೋಣಿಚೀಲದಲ್ಲಿ ಹಾಕಿ ಕೆರೆಯಲ್ಲಿ ಹೂತುಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ...

Related Articles

ಅಲ್ಪಸಂಖ್ಯಾತ ಯುವಕರಿಗೆ ಸೈನಿಕ ತರಬೇತಿಗೆ ಸಿ.ಟಿ. ರವಿ ವಿರೋಧ

ಚಿಕ್ಕಮಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 6,000ಕ್ಕೂ ಹೆಚ್ಚು ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಸೈನಿಕ...

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ

ಚಿಕ್ಕಮಗಳೂರು: ನಗರದ ರಾಮನಹಳ್ಳಿ ಸಮೀಪದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ...

ಬೈಕ್ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧ ಸಾವು

ಚಿಕ್ಕಮಗಳೂರು: ವೇಗವಾಗಿ ಬಂದ ಬೈಕ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಹಿಂದಿನಿಂದ ಡಿಕ್ಕಿ ಹೊಡೆದ...

ಮತ್ತಿಕಟ್ಟೆ–ಬಿ. ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ ₹2.5 ಕೋಟಿ ಅನುದಾನ

ಮೂಡಿಗೆರೆ: ಹಲವು ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ...