Home namma chikmagalur chikamagalur ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ
chikamagalurHomeLatest Newsnamma chikmagalur

ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ

Share
Share

ಚಿಕ್ಕಮಗಳೂರು: ರೈಲು ನಿಲ್ದಾಣದ ನವೀಕರಣ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಸರೆನ್ಸ್ ಮೂಲಕ ಈ ಯೋಜನೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ಯಡಿ ಸುಮಾರು 22 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಚಿಕ್ಕಮಗಳೂರು ರೈಲು ನಿಲ್ದಾಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರಿನಿಂದ ಪ್ರಧಾನಿಯವರು ಚಾಲನೆ ನೀಡಲಿರುವ ಈ ಯೋಜನೆಯು ರೈಲ್ವೆ ಮೂಲಸೌಕರ್ಯ ಸುಧಾರಣೆ, ಪ್ರಯಾಣಿಕರ ಸೌಲಭ್ಯಗಳ ಉನ್ನತೀಕರಣ ಹಾಗೂ ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ತಿಳಿಸಿದ್ದಾರೆ.

ನಗರದ ರೈಲ್ವೆ ನಿಲ್ದಾಣವು ಇದೀಗ ನೂತನ ಕಳೆಯೊಂದಿಗೆ ಕಂಗೊಳಿಸುತ್ತಿದೆ. 22 ಕೋಟಿ ರೂಪಾಯಿಗಳ ಬೃಹತ್ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿದ್ದು, ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಗಣ್ಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಸಂಸದರು, ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಅತ್ಯಂತ ತೃಪ್ತಿದಾಯಕವಾಗಿ ಮೂಡಿಬಂದಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಶುಕ್ರವಾರ ಪ್ರಧಾನಮಂತ್ರಿಗಳು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರುವ ಐತಿಹಾಸಿಕ ಸಂದರ್ಭದಲ್ಲೇ, ಈ ನೂತನ ಕಾಮಗಾರಿಗಳನ್ನೂ ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದರ ಜೊತೆಗೆ, ಜಿಲ್ಲೆಗೆ ಇಂಟರ್‌ಸಿಟಿ ರೈಲು ಸೌಲಭ್ಯವನ್ನು ಒದಗಿಸುವ ಭರವಸೆಯೂ ವ್ಯಕ್ತವಾಗಿರುವುದು ಜನತೆಗೆ ಮತ್ತಷ್ಟು ಸಂತಸದ ವಿಚಾರವಾಗಿದೆ ಎಂದು ಅವರು ತಿಳಿಸಿದರು.

Inauguration of the renovated railway station today

 

Share

Leave a comment

Leave a Reply

Your email address will not be published. Required fields are marked *

Don't Miss

ತೋರಣಕಾಡು ಗ್ರಾಮದಲ್ಲಿ 10 ಅಡಿ ಉದ್ದದ ಬೃಹತ್ ಹೆಬ್ಬಾವು

ಚಿಕ್ಕಮಗಳೂರು: ಸುಮಾರು ೧೦ ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಕಾಫಿ ತೋಟದಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಕಳಸ ತಾಲೂಕಿನ ಸಂಸ್ಥೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರಣಕಾಡು ಗ್ರಾಮದಲ್ಲಿ ನಡೆದಿದೆ....

ದಾವೂದ್ ಇಬ್ರಾಹಿಂ ವೈಭವೀಕರಿಸಿದ ಪ್ರವಾಸಿ ಬಸ್ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಪ್ರವಾಸಿ ಬಸ್ಸಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಬರಹ ಪತ್ತೆಯಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಬಸ್ಸಿನ ಮೇಲೆ ಇಂಗ್ಲಿಷ್‌ನಲ್ಲಿ ‘Dawood Rise...

Related Articles

ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ- ಜಿಲ್ಲೆಯ ಆರು ಜನರಿಗೆ ಕಾಟಚಾರಕ್ಕೆ ನೇಮಕ?

ಚಿಕ್ಕಮಗಳೂರು: ರಾಜ್ಯ ಸರ್ಕಾರ ವಿವಿಧ ನಿಗಮಗಳಿಗೆ ಆರು ಜನರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.ಅವುಗಳಲ್ಲಿ ಜಮಕ್ಕುಂಟು...

ನೂತನ ಸೌಲಭ್ಯಗಳೊಂದಿಗೆ ಚಿಕ್ಕಮಗಳೂರು ರೈಲು ನಿಲ್ದಾಣ ಲೋಕಾರ್ಪಣೆ

ಚಿಕ್ಕಮಗಳೂರು: ಪರಂಪರೆಯಿಂದ ಆಧುನಿಕತೆಯತ್ತ ಹೆಜ್ಜೆಯಿಟ್ಟಿರುವ ಚಿಕ್ಕಮಗಳೂರು ರೈಲು ನಿಲ್ದಾಣವು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 22.06...

ತಂಬಾಕು ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ

ಚಿಕ್ಕಮಗಳೂರು:  ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಹಾಗೂ...

ಬಲವಂತವಾಗಿ ರೈತರ ಸಾಲ ವಸೂಲಿ ಮಾಡಬಾರದು

ಚಿಕ್ಕಮಗಳೂರು: ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಲ್ಲಿನ ರೈತರು ಬಾಂಕುಗಳಿಂದ ಕೃಷಿ ಉದ್ದೇಶಕ್ಕೆ ಪಡೆದಿರುವ ಸಾಲದ ಬಾಕಿಯನ್ನು ವಸೂಲಿಮಾಡಲು...