Home namma chikmagalur chikamagalur  ಕಾರು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ – ಐವರು ಆರೋಪಿಗಳ ಬಂಧನ
chikamagalurCrime NewsHomeLatest Newsnamma chikmagalur

 ಕಾರು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ – ಐವರು ಆರೋಪಿಗಳ ಬಂಧನ

Share
Share

ಕಡೂರು: ಹೊನ್ನಾವರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನವೆಂಬರ್ 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚುನರ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದಾಗ ಕಡೂರು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಭದ್ರಾವತಿಯಲ್ಲಿ ಅಡಗಿದ್ದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ತೌಫಿಕ್ ಅವರ ಬಳಿ ಕೆಲಸ ಮಾಡುತ್ತಿದ್ದ ಇರ್ಫಾನ್ ಎಂಬಾತ ಕೆಲಸ ಬಿಟ್ಟ ಬಳಿಕ ದರೋಡೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ವ್ಯಾಪಾರಿ ಒಬ್ಬರೇ ಹಣದೊಂದಿಗೆ ಪ್ರಯಾಣಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತನ್ನ ಸಹಚರರೊಂದಿಗೆ ಸೇರಿ ಕೃತ್ಯ ಎಸಗಿದ್ದನು.

ಈ ಸಂಬಂಧ ಇರ್ಫಾನ್ ಹಾಗೂ ಗೌಸ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ 30 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಜಿಲ್ಲೆಯ ಅಡಿಕೆ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದ್ದ ಭಾರೀ ದರೋಡೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಕಡೂರು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Car intercepted and Rs 58 lakh robbed – Five accused arrested

Share

Leave a comment

Leave a Reply

Your email address will not be published. Required fields are marked *

Don't Miss

ಅಲ್ಪಸಂಖ್ಯಾತ ಯುವಕರಿಗೆ ಸೈನಿಕ ತರಬೇತಿಗೆ ಸಿ.ಟಿ. ರವಿ ವಿರೋಧ

ಚಿಕ್ಕಮಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 6,000ಕ್ಕೂ ಹೆಚ್ಚು ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಸೈನಿಕ ತರಬೇತಿ ನೀಡಲು ಹೊರಡಿಸಿರುವ ಆದೇಶಕ್ಕೆ ಬಿಜೆಪಿ ನಾಯಕ ಹಾಗೂ ಶಾಸಕ ಸಿ.ಟಿ. ರವಿ ತೀವ್ರ...

ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳು ಬೈಕ್ ಅಪಘಾತಕ್ಕೀಡಾಗಿ, ಮಗಳು ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ....

Related Articles

ಕಾಂಗ್ರೆಸ್ ನ ಅಡುಗೂಲಜ್ಜಿ ಕತೆ ಬಿಜೆಪಿಯ ಹೋರಾಟವೋ ಹೊಂದಾಣಿಕೆಯೋ ಜೆಡಿ‌ಎಸ್ ವ್ಯಾಪಾರಸ್ಥರ ಕಾಟ ?

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪಕ್ಷಗಳ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಯಾವ,ಯಾವ ಪಕ್ಷಗಳ ಆಟಗಾರರು ಮತ್ತು ಆಟ...

ಮನೆ ಕಳ್ಳತನಕ್ಕೆ ಹೊಂಚು ಹಾಕಿದ ಖದೀಮ: ಕಾಂಪೌಂಡ್ ಹಾರಿ ಪರಾರಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ. ನಗರದ ಹೌಸಿಂಗ್...

ಬ್ಯಾಗ್‌ನಿಂದ ₹4.20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಡೂರು: ಸಂಬಂಧಿಕರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿಟ್ಟಿದ್ದ ಸುಮಾರು 42 ಗ್ರಾಂ ತೂಕದ...

ಎಸ್. ಬಿದರೆ ಗ್ರಾಮದಲ್ಲಿ ಪೋಕ್ಸೋ ಪ್ರಕರಣ ದಾಖಲು

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಿಸಿ, ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಕರಾಯಪಟ್ಟಣ...