Home ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ
HomeLatest Newsnamma chikmagalurTarikere

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Share
Share

ತರೀಕೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಪಟ್ಟಣದ ತಾಯರ್ ಬೀದಿಯಲ್ಲಿ ನಡೆದಿದೆ.

ಪಟ್ಟಣದ ಗಣಪತಿ ಪೆಂಡಾಲ್ ಹಿಂಭಾಗದ ತಾಯರ್ ಬೀದಿಯ ನೂರ್ ಅಹ್ಮದ್ ಅವರಿಗೆ ಸೇರಿದ ಮನೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಬಟ್ಟೆಬರೆ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆತಂಕಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹರಡುವುದು ತಪ್ಪಿದೆ.

ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

House catches fire due to a short circuit

Share

Leave a comment

Leave a Reply

Your email address will not be published. Required fields are marked *

Don't Miss

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು ಅತಿ ಚಿಕ್ಕ ವಯಸ್ಸಿನಲ್ಲೇ ಅಗಲಿರುವುದು ವೈಯಕ್ತಿಕವಾಗಿ ಅಪಾರ ನೋವು ತಂದಿದೆ ಎಂದು ಮಾಜಿ ಸಚಿವೆ...

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ....

Related Articles

ಭದ್ರ ಮಾಫಿಯಾ : ಪೈಪ್ ನುಂಗಿ ನೀರು ಕುಡಿಯುವ ಶಾಸಕರುಗಳು ಮತ್ತು ಇಂಜಿನಿಯರ್ ಗಳು?

ಚಿಕ್ಕಮಗಳೂರು: ಜಿಲ್ಲೆಯಿಂದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಅಂತರ್ ಜಲ ಹೆಚ್ಚಳ...

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ...

ಚಿಕ್ಕಮಗಳೂರು ಪ್ರೀಮಿಯರ್ ಲೀಗ್‌ಗೆ ಶಾಸಕ ತಮ್ಮಯ್ಯ ಚಾಲನೆ

ಚಿಕ್ಕಮಗಳೂರು: ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸದೃಢತೆಯೂ ವೃದ್ಧಿಯಾಗುತ್ತದೆ....