ಕಡೂರು: ಕಾರು ಮತ್ತು ಥಾರ್ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಸ್ಕಾಂ ಇಲಾಖೆಯ ಕಿರಿಯ ಎಂಜಿನಿಯರ್ (ಜೆಇ) ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು 49 ವರ್ಷದ ಸನತ್ ಎಂದು ಗುರುತಿಸಲಾಗಿದೆ. ಇವರು ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ತಮ್ಮ ಫೋರ್ಡ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ಬಂದ ಥಾರ್ ಜೀಪ್ಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಫೋರ್ಡ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸನತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಥಾರ್ ಜೀಪ್ನಲ್ಲಿದ್ದ ಮಂಜುಳಾ, ಸ್ವಾತಿ ಹಾಗೂ ಸೋಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Horrific collision between car and Thar: MESCOM JE dies on the spot
Leave a comment