Home namma chikmagalur chikamagalur ಎಐಟಿಯುಸಿ ಸಮ್ಮೇಳನಕ್ಕೆ ಚಿಕ್ಕಮಗಳೂರಿನಿಂದ 1,000ಕ್ಕೂ ಕಾರ್ಮಿಕರು
chikamagalurHomeLatest Newsnamma chikmagalur

ಎಐಟಿಯುಸಿ ಸಮ್ಮೇಳನಕ್ಕೆ ಚಿಕ್ಕಮಗಳೂರಿನಿಂದ 1,000ಕ್ಕೂ ಕಾರ್ಮಿಕರು

Share
Share

ಚಿಕ್ಕಮಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) 43ನೇ ರಾಷ್ಟ್ರೀಯ ಸಮ್ಮೇಳನವು ನ.22ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಇದರ ಅಂಗವಾಗಿ ನ.22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದುಡಿಯುವ ವರ್ಗದ ಬೃಹತ್ ರ್ಯಾಲಿ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಎಸ್. ವಿಜಯ್ ಕುಮಾರ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಂಗವಾಗಿ ನಡೆಯುವ ಬಹಿರಂಗ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ 1,000ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು, ತೋಟ ಕಾರ್ಮಿಕರು ಹಾಗೂ ವಿವಿಧ ಹೊರಗುತ್ತಿಗೆ ನೌಕರರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

1920ರಲ್ಲಿ ಸ್ಥಾಪನೆಯಾದ ಎಐಟಿಯುಸಿ ದೇಶದ ಅತ್ಯಂತ ಹಳೆಯ ಕಾರ್ಮಿಕ ಸಂಘಟನೆಗಳಲ್ಲಿ ಒಂದಾಗಿದೆ. ಲಾಲಾ ಲಜಪತ್ ರಾಯ್ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾದ ಈ ಸಂಘಟನೆಯು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುವುದರ ಜತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿಯೂ ಮಹತ್ವದ ಕೊಡುಗೆ ನೀಡಿದೆ. ದಿವಾನ್ ಚಮನ್ ಲಾಲ್ ಅವರು ಸಂಘಟನೆಯ ಮೊದಲ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಾಲಗಂಗಾಧರ ತಿಲಕ್, ಎನ್.ಎಂ. ಜೋಶಿ, ಜೋಸೆಫ್ ಬ್ಯಾಪ್ಟಿಸ್ಟಾ ಹಾಗೂ ಬಿ.ಪಿ. ವಾಡಿಯಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಂಘಟನೆಯ ಸ್ಥಾಪನೆಗೆ ಶ್ರಮಿಸಿದ್ದಾರೆ ಎಂದು ವಿವರಿಸಿದರು.

ಕಾರ್ಮಿಕರ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳ ರಕ್ಷಣೆ, ಕಾರ್ಮಿಕ ಕಾಯ್ದೆಗಳ ಅನುಷ್ಠಾನ ಹಾಗೂ ದುಡಿಯುವ ವರ್ಗದಲ್ಲಿ ರಾಜಕೀಯ ಮತ್ತು ಸಾಮಾಜಿಕ ಅರಿವು ಮೂಡಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಸುಮಾರು 50 ವರ್ಷಗಳಿಂದ ಎಐಟಿಯುಸಿ ಕಾರ್ಮಿಕರ ಪರವಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಹೋಟೆಲ್ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ತೋಟ ಕಾರ್ಮಿಕರು, ಬಿಸಿಯೂಟ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು, ಬ್ಯಾಂಕ್, ಕೆಎಸ್‌ಆರ್‌ಟಿಸಿ ಹಾಗೂ ಅಂಚೆ ನೌಕರರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಹಕ್ಕುಗಳಿಗಾಗಿ ಹೋರಾಟ ನಡೆಸಿದೆ ಎಂದರು.

ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಕಾರ್ಮಿಕ ನಾಯಕರು ಭಾಗವಹಿಸಲಿದ್ದು, ಕಾರ್ಮಿಕರ ಸಮಸ್ಯೆಗಳು, ಹಕ್ಕುಗಳು ಹಾಗೂ ಭವಿಷ್ಯದ ಹೋರಾಟಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಂಗನವಾಡಿ ಸಂಘಟನೆಯ ಜಿಲ್ಲಾಧ್ಯಕ್ಷೆ ರೇಖಾ ಹಾಗೂ ಖಜಾಂಚಿ ಸಮೀನಾ ಬಾನು, ರಾಜಪ್ಪ, ಪುಷ್ಪಾ, ಇಂದುಮತಿ ಉಪಸ್ಥಿತರಿದ್ದರು.

Over 1000 workers from Chikkamagaluru to attend AITUC conference

Share

Leave a comment

Leave a Reply

Your email address will not be published. Required fields are marked *

Don't Miss

ದೇವೀರಮ್ಮನ ಬೆಟ್ಟ ಏರುವಾಗ ಹೃದಯಾಘಾತದಿಂದ ಭಕ್ತನ ಸಾವು

ಚಿಕ್ಕಮಗಳೂರು: ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕಾಗಿ ಬೆಟ್ಟ ಏರುತ್ತಿದ್ದ ಭಕ್ತರೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ...

ಸಾಲಬಾಧೆ ತಾಳಲಾರದೆ ಅಡಿಕೆ ತೋಟದಲ್ಲೇ ರೈತ ಆತ್ಮಹತ್ಯೆ

ಕಡೂರು: ಬರದ ಬೇಗುದಿ, ಕೃಷಿ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ದೀಪಾವಳಿಯ ಸಂಭ್ರಮದ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ...

Related Articles

ಕುಂಬಾರ ನೂತನ ಸಮುದಾಯ ಭವನ ಲೋಕಾರ್ಪಣೆ

ಚಿಕ್ಕಮಗಳೂರು:  ಹಿಂದಿನ ಕಾಲದಲ್ಲಿ ಕುಂಬಾರರು ತಯಾರಿಸಿದ ಮಣ್ಣಿನ ಮಡಿಕೆ, ದೀಪದ ಹಣತೆ ಸೇರಿದಂತೆ ಪ್ರತಿಯೊಂದು ವಸ್ತುಗಳು...

ತರೀಕೆರೆಯ ವ್ಯಕ್ತಿಯ ಬ್ಯಾಂಕ್ ಖಾತೆ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ವಂಚನೆ ಮೂಲಕ ಸಾರ್ವಜನಿಕರಿಂದ ಹಣ ಪಡೆದು, ಅದನ್ನು ತರೀಕೆರೆಯ ಕೆನರಾ ಬ್ಯಾಂಕ್ ಖಾತೆಯೊಂದಕ್ಕೆ...

ಕಲ್ಲುದೊಡ್ಡಿ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಚಿಕ್ಕಮಗಳೂರು: ನಗರದ ಹೊರವಲಯದ ಕಲ್ಲುದೊಡ್ಡಿ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...

ಟ್ರಾವೆಲ್ ಏಜೆಂಟ್ ನಿಂದ ಬಿಂಡಿಗಾ ಪೀಕ್ ರೆಸಾರ್ಟ್‌ಗೆ ₹8.28 ಲಕ್ಷ ವಂಚನೆ

ಚಿಕ್ಕಮಗಳೂರು: ಗ್ರಾಹಕರಿಗೆ ಹೋಟೆಲ್ ಕೊಠಡಿಗಳನ್ನು ಕಾಯ್ದಿರಿಸಿ ವಸತಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಿದರೂ, ಸೇವಾ ಶುಲ್ಕದ...