ಚಿಕ್ಕಮಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತಕ್ಕೊಳಗಾದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಪ್ಪ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169ರ ಅಮ್ಮಡಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಬಸವಾನಿ ನಿವಾಸಿ ಲಕ್ಷ್ಮಣ (65) ಮೃತಪಟ್ಟಿದ್ದಾರೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಲಕ್ಷ್ಮಣ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯಾಘಾತವಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಬಸ್ ನಿಯಂತ್ರಣ ತಪ್ಪಿದರೂ, ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ಮರಕ್ಕೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಬಸ್‌ನಲ್ಲಿದ್ದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಮುಂಜಾಗೃತೆಯಿಂದ ಬಸ್‌ನಲ್ಲಿದ್ದ ಹಲವು ಮಕ್ಕಳ ಪ್ರಾಣಾಪಾಯ ತಪ್ಪಿದಂತಾಗಿದೆ. ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Driver dies after crashing bus into a tree
Leave a comment