Home ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ
Home

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

Share
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಶಾಸಕ ಟಿ.ಡಿ. ರಾಜೇಗೌಡರ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವರಾಜ್ ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಇದೀಗ ಪ್ರಕರಣವನ್ನು ವಜಾಗೊಳಿಸಿದೆ.

2023ರ ವಿಧಾನಸಭಾ ಚುನಾವಣೆಯ ಶೃಂಗೇರಿ ಕ್ಷೇತ್ರದ ಫಲಿತಾಂಶದ ಮರು ಎಣಿಕೆ ವಿವಾದ ಮಾತ್ರ ಸುಪ್ರೀಂಕೋರ್ಟ್‌ನಲ್ಲಿ ಮುಂದುವರಿದಿದೆ. ತಿರಸ್ಕೃತ ಅಂಚೆ ಮತಗಳ ಮರು ಎಣಿಕೆಯಲ್ಲಿ ರಾಜೇಗೌಡರಿಗೆ ಒಂದು ಮತ ಹೆಚ್ಚುವರಿಯಾಗಿ ಲಭಿಸಿ, ಅವರ ಮುನ್ನಡೆ 202ಕ್ಕೆ ಏರಿತ್ತು. ಬಳಿಕ ಚುನಾವಣಾಧಿಕಾರಿ ಪುರಸ್ಕೃತ ಮತಗಳನ್ನೂ ಎಣಿಕೆಗೆ ಪರಿಗಣಿಸಿ ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದ್ದರು. ಇದರ ವಿರುದ್ಧ ರಾಜೇಗೌಡರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಚುನಾವಣಾ ಮತ ಎಣಿಕೆ ಕೊಠಡಿಯ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲದಿರುವ ವಿಚಾರವಾಗಿ ಸುಪ್ರೀಂಕೋರ್ಟ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಮುಂದಿನ ವಿಚಾರಣೆಗೆ ಅಗತ್ಯ ದಾಖಲೆಗಳು ಹಾಗೂ ದೃಶ್ಯಾವಳಿಗಳನ್ನು ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆ 2027ರ ಫೆಬ್ರವರಿಯಲ್ಲಿ ನಡೆಯಲಿದ್ದು, ಚುನಾವಣಾ ಆಯೋಗ ಸಲ್ಲಿಸಲಿರುವ ದಾಖಲೆಗಳ ಬಗ್ಗೆ ಕುತೂಹಲ ಮೂಡಿದೆ.

Criminal case filed against Jeevaraj dismissed by High Court

Share

Leave a comment

Leave a Reply

Your email address will not be published. Required fields are marked *

Don't Miss

ಸೈಕಲ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ವೃದ್ಧನಿಗೆ ಗಾಯ

ಕಡೂರು: ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ದ್ವಿಚಕ್ರ ವಾಹನ ಸವಾರನೊಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸದೆ ಸ್ಥಳದಿಂದ ಪರಾರಿಯಾಗಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿಪುರ...

ಸ್ಟಿಂಗ್ ಆಪರೇಶನ್ ಸುಳಿಯಲ್ಲಿ” ಗ್ಯಾರಂಟಿ ” ಶಾಸಕರುಗಳು?

ಚಿಕ್ಕಮಗಳೂರು; ಸ್ಟಿಂಗ್ ಆಪರೇಶನ್ ಎಂಬ ಅಸ್ತ್ರ ಇತ್ತೀಚೆಗೆ ಬಾರಿ ಸದ್ದು ಮಾಡುತ್ತಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸಚಿವ ಸಂಪುಟ ನಡೆಯುವ ಸಮಯದಲ್ಲಿ ಸ್ಟಿಂಗ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿರುವುದು ಫ್ಯಾಕ್ಟರಿ ಒನರ್...

Related Articles

ವಿಶ್ವೇಶ್ವರ ಭಟ್ ಸೇರಿಂದತೆ ಹಲವರ ಬಂದನಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

ಚಿಕ್ಕಮಗಳೂರು: ಬಸವಣ್ಣನವರ ಕುರಿತು ಆಧಾರರಹಿತ ಹಾಗೂ ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎನ್ನಲಾದ ಲೇಖಕ ರವಿ ಹಂಜ್,...

ತರೀಕೆರೆಯಲ್ಲಿ ಟ್ರ್ಯಾಕ್ಟರ್ ಡಿಕ್ಕಿಗೆ ಬೈಕ್ ಸವಾರ ಸಾವು

ತರೀಕೆರೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವಕ ಸ್ಥಳದಲ್ಲೇ...

ಕಡೂರಿನಲ್ಲಿ ಅಪರಿಚಿತ ಕಾರು ಡಿಕ್ಕಿಗೆ ಮಹಿಳೆ ಸಾವು

ಕಡೂರು: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು...

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು...