Home namma chikmagalur chikamagalur ಕಡೂರಿನಲ್ಲಿ ಅಪರಿಚಿತ ಕಾರು ಡಿಕ್ಕಿಗೆ ಮಹಿಳೆ ಸಾವು
chikamagalurCrime NewsHomeLatest Newsnamma chikmagalur

ಕಡೂರಿನಲ್ಲಿ ಅಪರಿಚಿತ ಕಾರು ಡಿಕ್ಕಿಗೆ ಮಹಿಳೆ ಸಾವು

Share
Share

ಕಡೂರು: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಮತ್ತಿಘಟ್ಟ ಗ್ರಾಮದ ಹೈಸ್ಕೂಲ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ನ.20ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಮತ್ತಿಘಟ್ಟ ಗ್ರಾಮದ ಲಕ್ಕಮ್ಮ ಎಂದು ಗುರುತಿಸಲಾಗಿದೆ. ಮೃತ ಲಕ್ಕಮ್ಮ ಅವರ ಸೋದರಳಿಯ ಶ್ರೀನಿವಾಸ್ ಅವರು ನೀಡಿರುವ ದೂರಿನ ಪ್ರಕಾರ, ನ.20ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಲಕ್ಕಮ್ಮ ಅವರು ಮತ್ತಿಘಟ್ಟ ಗ್ರಾಮದ ಬಸವರಾಜಪ್ಪ ಎಂಬುವರ ಹೊಸಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿ ಊಟ ಮಾಡಿಕೊಂಡು ಬರುವುದಾಗಿ ಮನೆಯವರಿಗೆ ತಿಳಿಸಿ ಹೋಗಿದ್ದರು.

ಊಟ ಮುಗಿಸಿಕೊಂಡು ವಾಪಸ್ ಮನೆಗೆ ತೆರಳಲು ಗ್ರಾಮದ ಹೈಸ್ಕೂಲ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ-69ರ ರಸ್ತೆ ಬದಿಯಲ್ಲಿ ಲಕ್ಕಮ್ಮ ಅವರು ಮಂಜಮ್ಮ, ರಾಘವೇಂದ್ರ, ಶ್ರೀನಿವಾಸ್ ಹಾಗೂ ಸಂತೋಷ ಅವರೊಂದಿಗೆ ನಿಂತಿದ್ದರು ಎನ್ನಲಾಗಿದೆ.

ಈ ವೇಳೆ ಮಧ್ಯಾಹ್ನ ಸುಮಾರು 1.10ಕ್ಕೆ ಬಾಣಾವರ ಕಡೆಯಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿಕೊಂಡು ಬಂದು ಲಕ್ಕಮ್ಮ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನ ನೋಂದಣಿ ಸಂಖ್ಯೆ ತಿಳಿದುಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಲಕ್ಕಮ್ಮ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಆಂಬುಲೆನ್ಸ್‌ಗೆ ಕರೆ ಮಾಡಿದ್ದು, ಬಳಿಕ ಶ್ರೀನಿವಾಸ್, ಅವರ ಚಿಕ್ಕಪ್ಪ ನಾರಾಯಣಸ್ವಾಮಿ ಹಾಗೂ ಇತರರು ಲಕ್ಕಮ್ಮ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು.

ಆದರೆ, ಪರೀಕ್ಷಿಸಿದ ವೈದ್ಯರು ಲಕ್ಕಮ್ಮ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶ್ರೀನಿವಾಸ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಥಮ ವರ್ತಮಾನ ವರದಿ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Woman dies after being hit by an unidentified car in Kadur

Share

Leave a comment

Leave a Reply

Your email address will not be published. Required fields are marked *

Don't Miss

ಸೈಕಲ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ವೃದ್ಧನಿಗೆ ಗಾಯ

ಕಡೂರು: ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ದ್ವಿಚಕ್ರ ವಾಹನ ಸವಾರನೊಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸದೆ ಸ್ಥಳದಿಂದ ಪರಾರಿಯಾಗಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿಪುರ...

ಸ್ಟಿಂಗ್ ಆಪರೇಶನ್ ಸುಳಿಯಲ್ಲಿ” ಗ್ಯಾರಂಟಿ ” ಶಾಸಕರುಗಳು?

ಚಿಕ್ಕಮಗಳೂರು; ಸ್ಟಿಂಗ್ ಆಪರೇಶನ್ ಎಂಬ ಅಸ್ತ್ರ ಇತ್ತೀಚೆಗೆ ಬಾರಿ ಸದ್ದು ಮಾಡುತ್ತಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸಚಿವ ಸಂಪುಟ ನಡೆಯುವ ಸಮಯದಲ್ಲಿ ಸ್ಟಿಂಗ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿರುವುದು ಫ್ಯಾಕ್ಟರಿ ಒನರ್...

Related Articles

ವಿಶ್ವೇಶ್ವರ ಭಟ್ ಸೇರಿಂದತೆ ಹಲವರ ಬಂದನಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

ಚಿಕ್ಕಮಗಳೂರು: ಬಸವಣ್ಣನವರ ಕುರಿತು ಆಧಾರರಹಿತ ಹಾಗೂ ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎನ್ನಲಾದ ಲೇಖಕ ರವಿ ಹಂಜ್,...

ತರೀಕೆರೆಯಲ್ಲಿ ಟ್ರ್ಯಾಕ್ಟರ್ ಡಿಕ್ಕಿಗೆ ಬೈಕ್ ಸವಾರ ಸಾವು

ತರೀಕೆರೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವಕ ಸ್ಥಳದಲ್ಲೇ...

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು...

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ...