Home namma chikmagalur chikamagalur ತರೀಕೆರೆಯಲ್ಲಿ ಟ್ರ್ಯಾಕ್ಟರ್ ಡಿಕ್ಕಿಗೆ ಬೈಕ್ ಸವಾರ ಸಾವು
chikamagalurCrime NewsHomeLatest Newsnamma chikmagalurTarikere

ತರೀಕೆರೆಯಲ್ಲಿ ಟ್ರ್ಯಾಕ್ಟರ್ ಡಿಕ್ಕಿಗೆ ಬೈಕ್ ಸವಾರ ಸಾವು

Share
Share

ತರೀಕೆರೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಾಯಗೊಂಡಿರುವ ಘಟನೆ ತರೀಕೆರೆ ಸಮೀಪದ ರಾಂಪುರದ ಬಳಿ ನ.20ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಸಲ್ಮಾನ್ ಶೇಖ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರ ನದೀಂ ಎಂಬುವರು ಗಾಯಗೊಂಡಿದ್ದು, ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತ ಸಲ್ಮಾನ್ ಶೇಖ್ ಅವರ ಸಹೋದರ ರಿಯಾನ್ ಪಾಷಾ ಅವರು ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಸಲ್ಮಾನ್ ಶೇಖ್ ಅವರು ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ನ.20ರಂದು ಬೆಳಗ್ಗೆ ಸುಮಾರು 7.30ಕ್ಕೆ ನದೀಂ ಅವರೊಂದಿಗೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬಳಿಕ ಬೆಳಗ್ಗೆ ಸುಮಾರು 8.55ಕ್ಕೆ ನದೀಂ ಅವರು ರಿಯಾನ್ ಪಾಷಾ ಅವರಿಗೆ ಕರೆ ಮಾಡಿ, ತಮ್ಮ ಬೈಕ್‌ನಲ್ಲಿ ಸಲ್ಮಾನ್ ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ತರೀಕೆರೆಗೆ ಬರುತ್ತಿದ್ದ ವೇಳೆ ರಾಂಪುರದ ಬಳಿ ಟ್ರ್ಯಾಕ್ಟರ್‌ಗೆ ಅಪಘಾತವಾಗಿದೆ ಎಂದು ತಿಳಿಸಿದ್ದಾರೆ.

ನಂತರ ರಿಯಾನ್ ಪಾಷಾ ಹಾಗೂ ಎಚ್.ಎಂ. ಸಿದ್ದಿಕ್ ಪಾಷ ಅವರು ಸ್ಥಳಕ್ಕೆ ತೆರಳಿ ನೋಡಿದಾಗ ಸಲ್ಮಾನ್ ಶೇಖ್ ರಸ್ತೆ ಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಸ್ಥಳದಲ್ಲಿ ಬೈಕ್ ಹಾಗೂ ಟ್ರ್ಯಾಕ್ಟರ್ ಕೂಡ ಇದ್ದವು. ನದೀಂ ಅವರಿಗೆ ಬೆನ್ನು, ಕಾಲು ಹಾಗೂ ಕುತ್ತಿಗೆಗೆ ಗಾಯಗಳಾಗಿದ್ದವು.

ನದೀಂ ನೀಡಿದ ಮಾಹಿತಿಯಂತೆ, ನ.20ರಂದು ಬೆಳಗ್ಗೆ ಸುಮಾರು 8.45ಕ್ಕೆ ಕೆಎ-18-ಇಎ-1421 ಸಂಖ್ಯೆಯ ಹೀರೋ ಬೈಕ್‌ನಲ್ಲಿ ಸಲ್ಮಾನ್ ಶೇಖ್ ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ತರೀಕೆರೆಗೆ ಬರುತ್ತಿದ್ದಾಗ ರಾಂಪುರದ ಬಳಿ ಎದುರಿನಿಂದ ಬಂದ ಕೆಎ-66-ಟಿ-7866 ಸಂಖ್ಯೆಯ ಟ್ರ್ಯಾಕ್ಟರ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಕೆಳಗೆ ಬಿದ್ದಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಸಲ್ಮಾನ್ ಶೇಖ್ ಅವರ ತಲೆಯ ಮೇಲೆ ಟ್ರ್ಯಾಕ್ಟರ್‌ನ ಟೈರ್ ಹರಿದು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಕ್ಷಣ ಆಂಬುಲೆನ್ಸ್ ಮೂಲಕ ಮೃತದೇಹ ಹಾಗೂ ಗಾಯಾಳುವನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಆಧಾರದ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 317/2026ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Bike rider dies after being hit by a tractor in Tarikere

Share

Leave a comment

Leave a Reply

Your email address will not be published. Required fields are marked *

Don't Miss

ಸೈಕಲ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ವೃದ್ಧನಿಗೆ ಗಾಯ

ಕಡೂರು: ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ದ್ವಿಚಕ್ರ ವಾಹನ ಸವಾರನೊಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸದೆ ಸ್ಥಳದಿಂದ ಪರಾರಿಯಾಗಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿಪುರ...

ಸ್ಟಿಂಗ್ ಆಪರೇಶನ್ ಸುಳಿಯಲ್ಲಿ” ಗ್ಯಾರಂಟಿ ” ಶಾಸಕರುಗಳು?

ಚಿಕ್ಕಮಗಳೂರು; ಸ್ಟಿಂಗ್ ಆಪರೇಶನ್ ಎಂಬ ಅಸ್ತ್ರ ಇತ್ತೀಚೆಗೆ ಬಾರಿ ಸದ್ದು ಮಾಡುತ್ತಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸಚಿವ ಸಂಪುಟ ನಡೆಯುವ ಸಮಯದಲ್ಲಿ ಸ್ಟಿಂಗ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿರುವುದು ಫ್ಯಾಕ್ಟರಿ ಒನರ್...

Related Articles

ವಿಶ್ವೇಶ್ವರ ಭಟ್ ಸೇರಿಂದತೆ ಹಲವರ ಬಂದನಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

ಚಿಕ್ಕಮಗಳೂರು: ಬಸವಣ್ಣನವರ ಕುರಿತು ಆಧಾರರಹಿತ ಹಾಗೂ ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎನ್ನಲಾದ ಲೇಖಕ ರವಿ ಹಂಜ್,...

ಕಡೂರಿನಲ್ಲಿ ಅಪರಿಚಿತ ಕಾರು ಡಿಕ್ಕಿಗೆ ಮಹಿಳೆ ಸಾವು

ಕಡೂರು: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು...

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು...

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ...