ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿ 173ರ ಉದ್ದೇಬೋರಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.
ಚಿಕ್ಕಮಗಳೂರಿನ ಎಐಟಿ (AIT) ಕಾಲೇಜಿನಲ್ಲಿ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಷ್ಣು (20) ದುರ್ಮರಣಕ್ಕೀಡಾದ ಬೈಕ್ ಸವಾರರಾಗಿದ್ದಾರೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ಟಿಪ್ಪರ್ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಇದೇ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಹಾಗೂ ಕಡೂರು ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಅಪಘಾತವನ್ನು ಕಂಡು ತಕ್ಷಣ ವಾಹನ ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು.
ಘಟನೆಯ ಕುರಿತು ಮಾಹಿತಿ ಪಡೆದ ಅವರು, ಅಪಘಾತಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.
ಅಲ್ಲದೆ, ಮೃತ ವಿದ್ಯಾರ್ಥಿಯ ದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tipper lorry-bike accident near Uddeborahalli- student dies
Leave a comment