Home namma chikmagalur chikamagalur ಮುತ್ತೋಡಿ ಅರಣ್ಯಕ್ಕೆ ಆನೆ ಸ್ಥಳಾಂತರದ ಪ್ರಕ್ರಿಯೆಗೆ ವಿರೋಧ
chikamagalurHomeLatest Newsnamma chikmagalur

ಮುತ್ತೋಡಿ ಅರಣ್ಯಕ್ಕೆ ಆನೆ ಸ್ಥಳಾಂತರದ ಪ್ರಕ್ರಿಯೆಗೆ ವಿರೋಧ

Share
Share

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಸೆರೆಹಿಡಿಯಲಾಗಿರುವ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಮುತ್ತೋಡಿ ಅರಣ್ಯಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ನಮ್ಮ ಸಂಪೂರ್ಣ ವಿರೋಧವಿದೆ. ಯಾವುದೇ ಕಾರಣಕ್ಕೂ ಹೊರಗಿನ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಬಲವಂತವಾಗಿ ತರುವ ನಿರ್ಧಾರ ಕೈಗೊಳ್ಳಬಾರದು ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಸರ್ಕಾರವನ್ನು ಒತ್ತಾಯಿಸಿದರು.

ಭಾನುವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೃಂಗೇರಿ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ಕಳೆದ ಹಲವು ವರ್ಷಗಳಿಂದ ಮಾನವ-ಪ್ರಾಣಿ ಸಂಘರ್ಷ ನಿರಂತರವಾಗಿ ಹೆಚ್ಚುತ್ತಿದೆ. ಕಾಡುಪ್ರಾಣಿಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಶೃಂಗೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಎರಡು ಕಾಡುಕೋಣಗಳ ದಾಳಿಯಲ್ಲಿಯೂ ಸಾವು ಸಂಭವಿಸಿದೆ. ಇತ್ತೀಚೆಗಷ್ಟೇ ಮತ್ತೊಂದು ಸಾವು ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ದೀರ್ಘಕಾಲದಿಂದ ಬೀಡುಬಿಟ್ಟಿದ್ದ ಸುಮಾರು 56 ಆನೆಗಳಲ್ಲಿ ಎರಡು ಆನೆಗಳನ್ನು ಸೆರೆಹಿಡಿಯಲಾಗಿದೆ. ಉಳಿದ 54 ಆನೆಗಳನ್ನು ಮೂಡಿಗೆರೆ ಮಾರ್ಗವಾಗಿ ಮುತ್ತೋಡಿ ಅರಣ್ಯಕ್ಕೆ ಅಟ್ಟುವ ಯೋಜನೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅರಣ್ಯ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಆನೆಗಳನ್ನು ಸ್ಥಳಾಂತರಿಸುವ ಮೊದಲು ಅವುಗಳ ಮೂಲ ನೆಲೆ ಯಾವುದು ಎಂಬುದನ್ನು ಗುರುತಿಸಿ, ಅಲ್ಲಿಗೆ ಮರಳಿಸುವಂತೆ ಲಿಖಿತ ಮನವಿ ಸಲ್ಲಿಸಲಾಗಿದೆ. ವಾಟ್ಸ್‌ಆ್ಯಪ್ ಮೂಲಕವೂ ಈ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಮುತ್ತೋಡಿ ಅರಣ್ಯದಲ್ಲಿ ಈಗಾಗಲೇ 450ಕ್ಕೂ ಹೆಚ್ಚು ಆನೆಗಳಿವೆ. ಅರಣ್ಯದ ಸುತ್ತಮುತ್ತಲಿನ ಸುಮಾರು 34 ತೋಟಗಳಲ್ಲಿ ಆನೆಗಳು ಬೀಡುಬಿಟ್ಟಿವೆ. ತಮ್ಮ ತೋಟದ ಸಮೀಪವೂ ಕಳೆದ ಒಂದು ತಿಂಗಳಿನಿಂದ ಮೂರು ಆನೆಗಳಿವೆ. ಅವುಗಳನ್ನು ಸೆರೆಹಿಡಿಯಲು ಆದೇಶ ನೀಡುವಂತೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊರಗಿನಿಂದ ಮತ್ತಷ್ಟು ಆನೆಗಳನ್ನು ತಂದು ಬಿಡುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮುತ್ತೋಡಿ ಅರಣ್ಯವೊಂದರಲ್ಲೇ ಅಲ್ಲದೆ, ಕಬ್ಬಿನಾಲೆ, ಕಾಗಿನೆರೆ, ಕೆಂಪೊಳೆ, ಬಿಸಲೆ, ಶಾಜಿಮಲ್ಲೆ, ಸುಬ್ರಹ್ಮಣ್ಯ, ಪುಷ್ಪಗಿರಿ ಹಾಗೂ ಶಿಶಿಲ ಸೇರಿದಂತೆ ಹಲವು ಅರಣ್ಯ ಪ್ರದೇಶಗಳಿವೆ. ಈ ಎಲ್ಲ ಪ್ರದೇಶಗಳಲ್ಲಿ ಸಾಕಷ್ಟು ವನ್ಯಜೀವಿಗಳಿವೆ. ಈಗಾಗಲೇ ಆನೆಗಳು ತಮ್ಮ ಸಂಚಾರದ ಸಂದರ್ಭದಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗಿ ಬರುತ್ತಿವೆ. ಅವುಗಳ ಸಹಜ ಚಲನವಲನಕ್ಕೆ ಯಾರೂ ಅಡ್ಡಿಪಡಿಸುತ್ತಿಲ್ಲ. ಆದರೆ, ಬೇರೆ ಪ್ರದೇಶದ ಆನೆಗಳನ್ನು ಉದ್ದೇಶಪೂರ್ವಕವಾಗಿ ಮೂಡಿಗೆರೆ ಭಾಗಕ್ಕೆ ಅಟ್ಟುವ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಕಾಡಾನೆಗಳ ಹಾವಳಿಯಿಂದ ರೈತರು ಬೆಳೆದ ಬೆಳೆಗಳು ನಿರಂತರವಾಗಿ ನಾಶವಾಗುತ್ತಿವೆ. ರಾತ್ರಿ ವೇಳೆ ಬೆಂಕಿ ಹಾಕಿಕೊಂಡು, ಕಾವಲು ಕಾಯುತ್ತಾ ಬೆಳೆ ಹಾಗೂ ಜಮೀನುಗಳನ್ನು ರಕ್ಷಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಮೀನುಗಳಿಗೆ ತೆರಳುವ ರೈತರು ಮತ್ತು ಕಾರ್ಮಿಕರ ಮೇಲೆಯೂ ಆನೆಗಳು ದಾಳಿ ನಡೆಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಸಾವುಗಳೂ ಸಂಭವಿಸಿವೆ. ಇಂತಹ ಸಂಕಷ್ಟದ ನಡುವೆ ಮತ್ತಷ್ಟು ಆನೆಗಳನ್ನು ಈ ಭಾಗಕ್ಕೆ ಸ್ಥಳಾಂತರಿಸುವುದು ಜನರ ಜೀವದೊಂದಿಗೆ ಚೆಲ್ಲಾಟವಾಡಿದಂತಾಗುತ್ತದೆ ಎಂದು ಹೇಳಿದರು.

ಸರ್ಕಾರ ಆನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ₹20 ಲಕ್ಷ ಪರಿಹಾರ ನೀಡುತ್ತಿದೆ. ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ಉದ್ಯೋಗ ಕಲ್ಪಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಆದರೆ, ಪರಿಹಾರ ನೀಡುವುದರಿಂದ ಜೀವಹಾನಿಯನ್ನು ತಡೆಯಲು ಸಾಧ್ಯವಿಲ್ಲ. ಮೃತಪಟ್ಟವರ ಕುಟುಂಬಗಳ ಕಣ್ಣೀರನ್ನು ನೋಡಲು ಸಾಧ್ಯವಿಲ್ಲ. ಜನರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿದರು.

ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಅವರು ಜಪಾನ್ ಪ್ರವಾಸದಲ್ಲಿದ್ದು, ವಾಪಸಾದ ತಕ್ಷಣ ಗಂಭೀರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅರಣ್ಯ ಸಚಿವರೂ ತಕ್ಷಣ ಆನೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆನೆಗಳನ್ನು ಬಲವಂತವಾಗಿ ಮೂಡಿಗೆರೆ ಭಾಗಕ್ಕೆ ಅಟ್ಟುವುದನ್ನು ನಿಲ್ಲಿಸಿ, ಅವುಗಳ ಮೂಲ ನೆಲೆಯತ್ತ ಸ್ವತಂತ್ರವಾಗಿ ತೆರಳಲು ಅವಕಾಶ ಕಲ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಆನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಮುಂದುವರಿದರೆ ಸ್ಥಳೀಯ ಜನರು ಪ್ರತಿಭಟನೆಗೆ ಮುಂದಾಗುವ ಸಾಧ್ಯತೆಯಿದೆ. ಜನರನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು. ಆದ್ದರಿಂದ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಂಡು, ಹೊರಗಿನ ಆನೆಗಳನ್ನು ಚಿಕ್ಕಮಗಳೂರು ಭಾಗಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದರು.

Opposition to the process of relocating elephants to the Muthodi forest

Share

Leave a comment

Leave a Reply

Your email address will not be published. Required fields are marked *

Don't Miss

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಗೌಡನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನ.18ರಂದು ಅಂಬಳೆ ಕೈಗಾರಿಕಾ ಪ್ರದೇಶದಲ್ಲಿ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ 110ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಇದೇ ಸಂದರ್ಭದಲ್ಲಿ ನೂತನ...

Related Articles

ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಕ

ಕನ್ನಡ,ಕನ್ನಡ ಬನ್ನಿ ನಮ್ಮ ಸಂಗಡ ಎನ್ನುವ ಬದಲಿಗೆ ಕನ್ನಡ, ಕನ್ನಡ ನಮಗೆ ದೇಣಿಗೆ ನಿಮಗೆ ಬೇಕಾದ...

ಕಾಡನೆಗಳ ಕಾಟಕ್ಕೆ ಶಾಸಕರ ರಾಜೀನಾಮೆ ಹೈಡ್ರಾಮಾ ?.

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ಇಬ್ಬರ ಸಾವಿಗೆ ಕಾರಣವಾಗಿದ್ದು ಜನ...

ಆನೆಗಳ ವಾಪಸ್ ಕಳುಹಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅರಣ್ಯ ಇಲಾಖೆ ರಹಸ್ಯವಾಗಿ...

ಹಾಸನ ಜಿಲ್ಲೆಯ ಡಿಎಫ್‌ಒ ಹರೀಶ್ ವಿರುದ್ಧ ಶಾಸಕ ಎಚ್.ಡಿ. ತಮ್ಮಯ್ಯ ಆಕ್ರೋಶ

ಚಿಕ್ಕಮಗಳೂರು: ಕಳೆದ ಐದಾರು ವರ್ಷಗಳಿಂದ ಜಿಲ್ಲೆಯಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಹಾಸನ ಜಿಲ್ಲೆಯಲ್ಲಿರುವ ಕಾಡಾನೆಗಳನ್ನು ಬಲವಂತವಾಗಿ...