Home namma chikmagalur chikamagalur ಜಿಲ್ಲೆಯ ಎಂಟು ತಾಲೂಕುಗಳ ಸರ್ವೇ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
chikamagalurHomeLatest Newsnamma chikmagalur

ಜಿಲ್ಲೆಯ ಎಂಟು ತಾಲೂಕುಗಳ ಸರ್ವೇ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Share
Share

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಜಿಲ್ಲೆಯ ಎಂಟು ತಾಲೂಕುಗಳಲ್ಲಿರುವ ಸರ್ವೇ ಇಲಾಖೆಯ ADLR ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದೆ. ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಶೃಂಗೇರಿ, ಎನ್‌.ಆರ್‌.ಪುರ, ಕೊಪ್ಪ, ತರೀಕೆರೆ ಹಾಗೂ ಅಜ್ಜಂಪುರದ ಕಚೇರಿಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್‌ಪಿ ನಂದಿನಿ ಹಾಗೂ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ಗಳಾದ ಮಲ್ಲಿಕಾರ್ಜುನ್, ಗವಿರಾಜ್, ರುದ್ರೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ತಂಡದಲ್ಲಿ ಭಾಗವಹಿಸಿದ್ದಾರೆ.

ಸರ್ವೇ ಇಲಾಖೆಯ ಕಚೇರಿಗಳಲ್ಲಿನ ಕಡತಗಳು, ಭೂಮಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ವಿವಿಧ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಕಾರ್ಯಾಚರಣೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.

Lokayukta raids on survey offices in the district’s eight taluks

Share

Leave a comment

Leave a Reply

Your email address will not be published. Required fields are marked *

Don't Miss

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ....

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್...

Related Articles

ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ,...

ಸರಗಳ್ಳರ ಬಂಧನ: 21 ಲಕ್ಷ ರೂ. ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ...

ಸಂವಿಧಾನದ ಆಶಯಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಮಾತನಾಡುವಷ್ಟೇ ಅದರಲ್ಲಿರುವ ಮೂಲಭೂತ ಕರ್ತವ್ಯಗಳನ್ನೂ ಪ್ರತಿಯೊಬ್ಬರೂ ಜೀವನದಲ್ಲಿ...

‘ಅಸ್ಪೃಶ್ಯತೆ ನಿವಾರಣೆಗೆ ಜನರ ಮನಸ್ಥಿತಿ ಬದಲಾಗಬೇಕು’

ಚಿಕ್ಕಮಗಳೂರು: ಸಂವಿಧಾನ ಮತ್ತು ಕಾನೂನಿನಿಂದ ಮಾತ್ರ ದೇಶದಲ್ಲಿರುವ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ....