Home namma chikmagalur chikamagalur ಕಾಡಾನೆ ಸಮಸ್ಯೆಗೆ ಪಕ್ಷಾತೀತವಾಗಿ ಒಗ್ಗಟ್ಟಿನ ಹೋರಾಟ ಅಗತ್ಯ
chikamagalurHomeLatest Newsnamma chikmagalur

ಕಾಡಾನೆ ಸಮಸ್ಯೆಗೆ ಪಕ್ಷಾತೀತವಾಗಿ ಒಗ್ಗಟ್ಟಿನ ಹೋರಾಟ ಅಗತ್ಯ

Share
Share

ಚಿಕ್ಕಮಗಳೂರು: ಮೂಡಿಗೆರೆ ಭಾಗಕ್ಕೆ 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಆತಂಕಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜಕೀಯ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಡಾನೆಗಳ ಸ್ಥಳಾಂತರದಿಂದ ಮೂಡಿಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎದುರಾಗಬಹುದಾದ ಅಪಾಯಗಳ ಕುರಿತು ಈಗಾಗಲೇ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಕಾರ್ಯದರ್ಶಿ ರವಿ ಅವರೊಂದಿಗೆ ಚರ್ಚಿಸಲಾಗಿದೆ. ಈ ಸಮಸ್ಯೆಯ ಕುರಿತು ಚರ್ಚಿಸಲು ಇದೇ ತಿಂಗಳ 30ರಂದು ಅರಣ್ಯ ಸಚಿವರು ವಿಶೇಷ ಸಭೆ ಕರೆದಿದ್ದು, ತಾವೂ ಸಭೆಯಲ್ಲಿ ಭಾಗವಹಿಸಲಿರುವುದಾಗಿ ತಿಳಿಸಿದರು.

ಕಾಡಾನೆ ಸಮಸ್ಯೆ ವಿಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಜಿಲ್ಲೆಯ ಶಾಸಕರು, ಸಂಸದರು ಹಾಗೂ ಎಲ್ಲ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಂದೇ ಧ್ವನಿಯಲ್ಲಿ ಸರ್ಕಾರದ ಗಮನ ಸೆಳೆದು ಪರಿಹಾರಕ್ಕೆ ಪ್ರಯತ್ನಿಸಬೇಕು. ರಾಜ್ಯ ಸರ್ಕಾರದ ಮಟ್ಟದಲ್ಲಿ ತಾಂತ್ರಿಕ ಅಥವಾ ಆಡಳಿತಾತ್ಮಕ ತೊಡಕುಗಳಿದ್ದರೆ, ಸೂಕ್ತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಈ ಕುರಿತು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಸಹಕಾರ ಒದಗಿಸಲು ತಾವು ಸಿದ್ಧರಿರುವುದಾಗಿ ಭರವಸೆ ನೀಡಿದರು.

ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಹಳಿ ಬೇಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಕ್ರಮ ವಹಿಸಿದ್ದರೂ, ಕಾಮಗಾರಿ ಆರಂಭವಾಗದಿರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿರುವುದಾಗಿ ತಿಳಿಸಿದರು. ತಾಂತ್ರಿಕ ಕಾರಣಗಳಿಂದ ಸ್ವಲ್ಪ ವಿಳಂಬವಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹ

ಇದೇ ವೇಳೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟದ ಬಗ್ಗೆಯೂ ಮಾತನಾಡಿದ ಸಂಸದರು, ಅವರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಪರಿಗಣಿಸಿ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ದುಪ್ಪಟ್ಟುಗೊಳಿಸುವ ಭರವಸೆ ನೀಡಲಾಗಿತ್ತು. ಅದನ್ನು ಸರ್ಕಾರ ಗಮನದಲ್ಲಿಟ್ಟುಕೊಂಡು ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಏಳು-ಎಂಟು ದಿನಗಳಿಂದ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಕಾರ್ಯಕರ್ತೆಯರಲ್ಲಿ ಕೆಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿ. ಜನರ ಆರೋಗ್ಯದ ವಿಚಾರದಲ್ಲಿ ನೇರವಾಗಿ ಕೆಲಸ ಮಾಡುವ ಬಡ ಮಹಿಳಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಯನ್ನು ಮುಂದಿಟ್ಟುಕೊಳ್ಳಬಾರದು. ಹಣಕಾಸಿನ ಸಮಸ್ಯೆಗಳಿದ್ದರೆ ಕೇಂದ್ರ ಸರ್ಕಾರದ ನೆರವು ಪಡೆಯುವ ಕುರಿತು ಚರ್ಚಿಸಬಹುದು. ಕೇಂದ್ರದಿಂದ ಅಗತ್ಯ ಸಹಕಾರ ಒದಗಿಸಲು ಸಂಸದರೆಲ್ಲರೂ ಪಕ್ಷಭೇದ ಮರೆತು ಪ್ರಯತ್ನಿಸುವುದಾಗಿ ತಿಳಿಸಿದರು.

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಅವರ ಬೇಡಿಕೆಗಳನ್ನು ಈಡೇರಿಸಲು ಇನ್ನಷ್ಟು ವಿಳಂಬ ಮಾಡಿದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಕಾರ್ಯಕರ್ತೆಯರ ಆರೋಗ್ಯಕ್ಕೂ ತೊಂದರೆಯಾಗಬಹುದು. ಆದ್ದರಿಂದ ತಕ್ಷಣವೇ ಮಾತುಕತೆ ಕರೆದು ಅವರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

ಕಾಡಾನೆ ಸಮಸ್ಯೆಯಾಗಲಿ, ಆಶಾ ಕಾರ್ಯಕರ್ತೆಯರ ಹೋರಾಟವಾಗಲಿ, ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರಗಳು ತಕ್ಷಣ ಸ್ಪಂದಿಸಿ ಪರಿಹಾರ ಕಂಡುಕೊಳ್ಳಬೇಕು ಎಂಬುದು ಅವರ ಮಾತಿನ ಸಾರವಾಗಿತ್ತು.

A united non-partisan struggle is necessary to address the wild elephant problem.

Share

Leave a comment

Leave a Reply

Your email address will not be published. Required fields are marked *

Don't Miss

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ....

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್...

Related Articles

ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ,...

ಸರಗಳ್ಳರ ಬಂಧನ: 21 ಲಕ್ಷ ರೂ. ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ...

ಸಂವಿಧಾನದ ಆಶಯಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಮಾತನಾಡುವಷ್ಟೇ ಅದರಲ್ಲಿರುವ ಮೂಲಭೂತ ಕರ್ತವ್ಯಗಳನ್ನೂ ಪ್ರತಿಯೊಬ್ಬರೂ ಜೀವನದಲ್ಲಿ...

‘ಅಸ್ಪೃಶ್ಯತೆ ನಿವಾರಣೆಗೆ ಜನರ ಮನಸ್ಥಿತಿ ಬದಲಾಗಬೇಕು’

ಚಿಕ್ಕಮಗಳೂರು: ಸಂವಿಧಾನ ಮತ್ತು ಕಾನೂನಿನಿಂದ ಮಾತ್ರ ದೇಶದಲ್ಲಿರುವ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ....