Home namma chikmagalur chikamagalur ಜಿಲ್ಲಾಸ್ಪತ್ರೆ ಸರಿಪಡಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
chikamagalurHomeLatest Newsnamma chikmagalur

ಜಿಲ್ಲಾಸ್ಪತ್ರೆ ಸರಿಪಡಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Share
Share

ಚಿಕ್ಕಮಗಳೂರು : ಜಿಲ್ಲಾ ಕೇಂದ್ರದಲ್ಲಿರುವ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಇಂದು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿಂದು ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿರುವ ಅರಳಗುಪ್ಪೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ರೋಗಿಗಳು ಮತ್ತಷ್ಟುನರಳುವಂತಾಗಿದೆ. ಪ್ರತಿ ದಿನ ಸುಮಾರು ೮೦೦ ರಿಂದ ೯೦೦ ಜನ ರೋಗಿಗಳು ಹೊರರೋಗಿಗಳಾಗಿ ನೋಂದಣಿ ಯಾಗುತ್ತಿದ್ದು ೧೨೫ರಿಂದ ೧೫೦ ಜನ ಒಳರೋಗಿಗಳಾಗಿ ನೋಂದಣಿಯಾಗುತ್ತಿದ್ದಾರೆಎಂದಿದ್ದಾರೆ.

ಈ ಸಾರ್ವಜನಿಕ ಆಸ್ಪತ್ರೆಯಲ್ಲೂ ಹೆಚ್ಚಾಗಿ ಬಡವರು ಕಾರ್ಮಿಕರೇ ಆಶ್ರಯಿಸುತ್ತಿದ್ದು ಉಳ್ಳವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಜಿಲ್ಲಾಸ್ಪತ್ರೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಸುತ್ತೇವೆ ಎಂದವರು ಇತ್ತ ತಿರುಗಿಯೂ ನೋಡುತ್ತಿಲ್ಲ. ಮೆಡಿಕಲ್ ಕಾಲೇಜ್ ಇರುವುದರಿಂದ ಉತ್ತಮ ಮೂಲಭೂತ ಸೌಲಭ್ಯಗಳು ಆಸ್ಪತ್ರೆಯಲ್ಲಿ ಇರಬೇಕಾಗಿತ್ತು. ಆದರೆ ಯಾವುದೇ ಅತ್ಯಾಧುನಿಕ ವೈದ್ಯಕೀಯ ಪರಿಕರಗಳು ಆಸ್ಪತ್ರೆಯಲ್ಲಿ ಲಭ್ಯವಿರುವುದಿಲ್ಲ ಎಂದು ಆರೋಪಿಸಿದ್ದಾರೆ.

ಸಿಟಿ ಸ್ಕ್ಯಾನಿಂಗ್ ಇದೆ ಇದಕ್ಕೆ ಬಡರೋಗಿಗಳು ಶುಲ್ಕ ಬರಿಸಬೇಕಾಗಿದೆ. ವೈದ್ಯರುಗಳು ಕರ್ತವ್ಯದ ಸಮಯದಲ್ಲಿ ಖಾಸಗಿ ನರ್ಸಿಂಗ್ ಹೋಂನಲ್ಲಿ ಇರುತ್ತಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಒ.ಪಿ.ಡಿಯಲ್ಲಿ ರೋಗಿಗಳಿಗೆ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಲಿಪ್ಸ್ ವ್ಯವಸ್ಥೆ ಇದ್ದರು ರೋಗಿಗಳಿಗೆ ದೊರಕುತ್ತಿಲ್ಲ.

ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಬಿಪಿಎಲ್ ಕಾರ್ಡ್‌ದಾರರಿಂದ ಶೇ೫೦% ಹಣವನ್ನು ವಸೂಲಿ ಮಾಡಲಾಗುತ್ತಿದೆ. ಆಸ್ಪತ್ರೆಯ ಆಂಬುಲೆನ್ಸ್ ಗಳು ರೋಗಿಗಳಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿವೆ. ೧೫ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲಾಸ್ಪತ್ರೆಯ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Protest by progressive organizations demanding improvements to the District Hospital

Share

Leave a comment

Leave a Reply

Your email address will not be published. Required fields are marked *

Don't Miss

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ....

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್...

Related Articles

ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ,...

ಸರಗಳ್ಳರ ಬಂಧನ: 21 ಲಕ್ಷ ರೂ. ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ...

ಸಂವಿಧಾನದ ಆಶಯಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಮಾತನಾಡುವಷ್ಟೇ ಅದರಲ್ಲಿರುವ ಮೂಲಭೂತ ಕರ್ತವ್ಯಗಳನ್ನೂ ಪ್ರತಿಯೊಬ್ಬರೂ ಜೀವನದಲ್ಲಿ...

‘ಅಸ್ಪೃಶ್ಯತೆ ನಿವಾರಣೆಗೆ ಜನರ ಮನಸ್ಥಿತಿ ಬದಲಾಗಬೇಕು’

ಚಿಕ್ಕಮಗಳೂರು: ಸಂವಿಧಾನ ಮತ್ತು ಕಾನೂನಿನಿಂದ ಮಾತ್ರ ದೇಶದಲ್ಲಿರುವ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ....