ಸಖರಾಯಪಟ್ಟಣ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣದ ಅಯ್ಯನಕೆರೆ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಚಿನ್ನಪ್ಪ ಎಂದು ಗುರುತಿಸಲಾಗಿದೆ. ನ.25ರಂದು ಸಂಜೆ ಸುಮಾರು 4.30ಕ್ಕೆ ಅವರು ಅಯ್ಯನಕೆರೆ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ KA-18-W-2038 ಬೈಕ್ನ ಸವಾರ ಅಶೋಕ್, ಬುಕ್ಕಸಾಗರ, ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಅಪಘಾತದಲ್ಲಿ ಚಿನ್ನಪ್ಪ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು, ಹಾಸನ ಹಾಗೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನ.26ರಂದು ಬೆಳಗ್ಗೆ ಸುಮಾರು 4.45ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರ ಮೊಮ್ಮಗಳು ಅರ್ಪಿತಾ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬೈಕ್ ಸವಾರ ಅಶೋಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Elderly pedestrian dies after being hit by a bike near Ayyanakere Cross
Leave a comment