ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕುಂಬಾರದ ಕಟ್ಟೆ ಕೆರೆಯಲ್ಲಿ ನಡೆದಿದೆ.
ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ರಂಜಿತ್ (15) ಮೃತ ದುರ್ದೈವಿ. ಮಳೆಯ ಕಾರಣ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿದ್ದು ಮಳೆಯ ನಡುವೆ ಬಾಲಕ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ.
ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A boy who went swimming in the lake drowned
Leave a comment