Home namma chikmagalur chikamagalur ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ
chikamagalurHomeLatest Newsnamma chikmagalur

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

Share
Share

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ.

ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ ಚಿರತೆ ಶೌಚಾಲಯದ ಒಳಗೆ ನುಗ್ಗಿದೆ. ಶೌಚಾಲಯದ ಒಳಗೆ ಹೋದ ನಂತರ ಶೌಚಾಲಯದ ಬಾಗಿಲು ಮುಚ್ಚಿದ ಕಾರಣ ಚಿರತೆಗೆ ಶೌಚಾಲಯದಿಂದ ಹೊರ ಬರಲು ಸಾಧ್ಯವಾಗದೆ ಬಂಧಿಯಾಗಿತ್ತು.

ಶೌಚಾಲಯದಲ್ಲಿ ಶಬ್ದ ಆಗುತ್ತಿರುವುದನ್ನು ಕೇಳಿಸಿಕೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಭದ್ರಾವತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್ ನಿರ್ದೇಶನದಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬಲೆ ಮತ್ತು ಬೋನಿನೊಂದಿಗೆ ಚಿರತೆ ಸೆರೆಹಿಡಿ ಯುವ ಕಾರ್ಯಾಚರಣೆ ಆರಂಭಿಸಿದ್ದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಸಲುವಾಗಿ ಮುದುಗುಂಡಿ ಗ್ರಾಮಕ್ಕೆ ಬಂದ ಶಿವಮೊಗ್ಗ ತ್ಯಾವರೆಕೊಪ್ಪದ ಪಶುವೈದ್ಯ ಡಾ.ಶ್ರವಣಸಿಂಗ್ ರಾಥೋಡ್ ತಂಡವು ಶೌಚಾಲಯದ ಮೇಲ್ಬಾಗದಿಂದ ಅರಿವಳಿಕೆ ಲಸಿಕೆ ನೀಡಿದ್ದಾರೆ.

ಪ್ರಜ್ಞೆ ತಪ್ಪಿದ ನಂತರ ಚಿರತೆಯನ್ನು ಸೆರೆಹಿಡಿದು ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಸಾಗಿಸಲಾಗಿದೆ. ಚಿರತೆಯ ಆರೋಗ್ಯ ತಪಾಸಣಾ ಕಾರ್ಯ ಮುಗಿದ ನಂತರ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಎಸಿಎಫ್ ಉಮ್ಮರ್ ಬಾದ್‌ಷಾ ಪತ್ರಿಕೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಇಂದು, ಡಿಆರ್‌ಎಫ್‌ಒ ಉಮೇಶ್ ಒಳಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂಧಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

A female leopard was caught in Mudugundi village

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...