Home namma chikmagalur chikamagalur ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ
chikamagalurHomeLatest Newsnamma chikmagalur

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

Share
Share

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ತರೀಕೆರೆ ಸರ್ಕಲ್‌ನಲ್ಲಿ ನಿಂತಿದ್ದ ವೇಳೆ, ಖಾಸಗಿ ಬಸ್‌ ಸ್ಟ್ಯಾಂಡ್ ಏಜೆಂಟ್ ಮಂಜುನಾಥ್ ಎಂಬಾತ ಏಕಾಏಕಿ ಸರ್ಕಾರಿ ಬಸ್‌ನೊಳಗೆ ನುಗ್ಗಿ ಪ್ರಯಾಣಿಕರನ್ನು ತಮ್ಮ ಖಾಸಗಿ ಬಸ್‌ಗೆ ಕರೆಯಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಸರ್ಕಾರಿ ವಾಹನದೊಳಗೆ ಬಂದು ಪ್ರಯಾಣಿಕರನ್ನು ಕರೆಯುತ್ತಿದ್ದ ಪುಂಡಾಟವನ್ನು ಪ್ರಶ್ನಿಸಿದ ಚಾಲಕ ಲೋಹಿತ್ ಅವರ ಮೇಲೆ ಆಕ್ರೋಶಗೊಂಡ ಆರೋಪಿ ಮಂಜುನಾಥ್, ಅಸಭ್ಯ ಪದಗಳಿಂದ ನಿಂದಿಸಿ ತನ್ನ ತಲೆಯಿಂದಲೇ ಚಾಲಕನ ಮೂಗಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಲಾಗಿದೆ.

ಏಕಾಏಕಿ ನಡೆದ ಈ ದಾಳಿಯಿಂದ ಚಾಲಕನ ಮೂಗಿನಿಂದ ತೀವು ರಕ್ತಸ್ರಾವವಾಗಿದ್ದು, ಅಷ್ಟಕ್ಕೇ ಬಿಡದ ಮತ್ತೊಬ್ಬ ಏಜೆಂಟ್ ಹರೀಶ್ ಎಂಬಾತನೊಂದಿಗೆ ಸೇರಿಕೊಂಡು ಚಾಲಕನ ಎದೆ ಹಾಗೂ ಮೈಕೈಗೆ ಮನಬಂದಂತೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಕೂಡಲೇ ಸ್ಥಳೀಯರು ಹಾಗೂ ಬಸ್ ನಿರ್ವಾಹಕ ಗಾಯಾಳು ಚಾಲಕನನ್ನು ರಕ್ಷಿಸಿ ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ದೌರ್ಜನ್ಯವೆಸಗಿದ ಇಬ್ಬರು ಖಾಸಗಿ ಬಸ್ ಏಜೆಂಟ್‌ಗಳ ವಿರುದ್ಧ ತರೀಕೆರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

A fight breaks out in the middle of a private bus agent’s street in Tarikere

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಸೆ.6ಕ್ಕೆ ಲಿಖಿತ ಪರೀಕ್ಷೆ

ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿಎಆರ್ ಹಾಗೂ ಡಿಎಆರ್ ವೃಂದದ...