Home Latest News ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟಕ್ಕೆ ಫುಲ್ ಸ್ಟಾಪ್
Latest NewschikamagalurHomenamma chikmagalur

ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟಕ್ಕೆ ಫುಲ್ ಸ್ಟಾಪ್

Share
Share

ಚಿಕ್ಕಮಗಳೂರು: ಚಾರ್ಮಾಡಿ ಜಲಪಾತಗಳ ಬಳಿ ಪ್ರವಾಸಿಗರ ಮೋಜು–ಮಸ್ತಿಗೆ ಫುಲ್ ಸ್ಟಾಪ್ ಹಾಕಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರು ಅಲರ್ಟ್ ಆಗಿದ್ದಾರೆ. ಬಂಡೆ ಹತ್ತುವ ಜಾಗಕ್ಕೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಜಲಪಾತಗಳ ಸ್ಥಳದಲ್ಲೇ ಪೊಲೀಸರು ಮೊಕ್ಕಾಂ ಹೂಡಲಿದ್ದಾರೆ. ಬಂಡೆಗಳ ಬಳಿ ಪೊಲೀಸರ ನಿರಂತರ ಗಸ್ತು ನಡೆಸಲಿದ್ದಾರೆ.

ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ನಡೆಸಿದ್ದರು.

ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದರು. ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ–ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ.

ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದರು.

ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದರು. ಇದೀಗ ಬಣಕಲ್ ಪೊಲೀಸರಿಂದ ಚಾರ್ಮಾಡಿ ಘಾಟಿಯಲ್ಲಿ ನಿರಂತರ ಗಸ್ತು ಆರಂಭಿಸಿದ್ದಾರೆ. ಹುಚ್ಚಾಟ ಮೆರೆಯುವ ಪ್ರವಾಸಿಗರ ಆಟಕ್ಕೆ ಕೊನೆಗೂ ನಿಯಂತ್ರಣ ಹೇರಲಾಗಿದೆ.

A full stop to the madness of tourists near waterfalls

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...