Home namma chikmagalur ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಪುಂಡಾನೆ
namma chikmagalurchikamagalurHomeLatest News

ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಪುಂಡಾನೆ

Share
Share

ಬಾಳೆಹೊನ್ನೂರು:  ನಾಲ್ಕು ದಿನಗಳ ಅಂತರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಅರಣ್ಯ ಇಲಾಖೆ ಆರಂಭಿಸಿದ್ದ ಕಾರ್ಯಾಚರಣೆಯಲ್ಲಿ ಮೊದಲ ದಿನವೇ ಪುಂಡಾನೆಯೊಂದು ಸೆರೆ ಸಿಕ್ಕಿದೆ.

ಎನ್.ಆರ್.ಪುರ ತಾಲ್ಲೂಕಿನ ಎಲೆಕಲ್ಲು ಬಳಿ ಸುಮಾರು 14 ವರ್ಷ ವಯಸ್ಸಿನ ಗಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ನಾಲ್ಕು ಸಾಕಾನೆಗಳು ನೆರವಿನೊಂದಿಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಅರಿವಳಿಕೆ ಚುಚ್ಚುಮದ್ದು ನೀಡಿದ ಬಳಿಕ ಆನೆ ಕಾಡಿನಲ್ಲಿ ಇಳಿಜಾರಿನ ಕಣಿವೆಯೊಳಗೆ ಓಡಿ ಬಿದ್ದಿತ್ತು. ಎಚ್ಚರಗೊಳ್ಳುವಷ್ಟರಲ್ಲಿ ಹಗ್ಗದಿಂದ ಬಿಗಿಯಲಾಗಿದೆ. ರಸ್ತೆಗೆ ಕರೆ ತರಲು ಸಾಕಾನೆಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾದರು. ಚಿಕ್ಕಮಗಳೂರು ವೃತ್ತದ ಸಿಸಿಎಫ್ ಯಶಪಾಲ್ ಕ್ಷೀರಸಾಗರ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಆನೆ ಸೆರೆ ಸಿಕ್ಕಿರುವ ಸುತ್ತಮುತ್ತಲ ಪ್ರದೇಶದಲ್ಲೇ ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಮೃತಪಟ್ಟಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಸ್ಥಳೀಯರು ಸೋಮವಾರ ಬಾಳೆಹೊನ್ನೂರಿನಲ್ಲಿ ಬಂದ್ ನಡೆಸಿದ್ದರು. ಆನೆ ಸೆರೆ ಕಾರ್ಯಾಚರಣೆ ಆರಂಭಿಸುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಸಕ್ರೆಬೈಲು ಆನೆ ಶಿಬಿರದಿಂದ ಸೋಮವಾರ ಮಧ್ಯಾಹ್ನದ ವೇಳೆಗೆ ಸಾಕಾನೆಗಳು ಬಂದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದರು.

‘ನಾಳೆ ಕಾರ್ಯಾಚರಣೆಗೆ ವಿಶ್ರಾಂತಿ ನೀಡಲಾಗುವುದು. ಪಿಸಿಸಿಎಫ್ ಅವರಿಂದ ಮತ್ತೊಮ್ಮೆ ಅನುಮತಿ ಪಡೆದು ಮತ್ತೊಂದು ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಗುರುವಾರ ಆರಂಭವಾಗಲಿದೆ. ಸೆರೆ ಸಿಕ್ಕಿರುವ ಮರಿಯಾನೆಯನ್ನು ಸಕ್ರೆಬೈಲು ಕ್ಯಾಂಪ್‌ನಲ್ಲಿ ಪಳಗಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

A gangster was caught in a wild elephant-catching operation.

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...