ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಆಲ್ದೂರು ಅರಣ್ಯ ವಲಯದ ಕುಂದೂರು ಫಾರೆಸ್ಟ್ನ ಹೆಬ್ಬಾಳ ಗದ್ದೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೆಬ್ಬಾಳ ಗದ್ದೆಯ ಜಮೀನೊಂದರಲ್ಲಿ ಕಾಡಾನೆ ಶವವಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆಲ್ದೂರು ವಲಯದ ಉನ್ನತ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಸಾವಿಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಜಮೀನಿನ ಸುತ್ತಮುತ್ತ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಸಾವನ್ನಪ್ಪಿದೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವಷ್ಟೇ ಆನೆಯ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.
A male wild elephant died in Hebbal paddy field in Kundur Forest.
Leave a comment