Home namma chikmagalur chikamagalur ಮನೆಹಾಳು ಕೆಲಸಕ್ಕೆ ಸಾಧನಾ ಸಮಾವೇಶವೇ
chikamagalurHomeLatest Newsnamma chikmagalur

ಮನೆಹಾಳು ಕೆಲಸಕ್ಕೆ ಸಾಧನಾ ಸಮಾವೇಶವೇ

Share
Share

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ದುಡ್ಡು ತಿಂದಿದ್ದು, ಎಸ್ ಸಿಪಿ ಎಸ್ ಟಿಪಿ ಅನುದಾನ ದುರ್ಬಳಕೆ, ಕಾರ್ಮಿಕ ಇಲಾಖೆಯಲ್ಲಿ ದುಡ್ಡು ಹೊಡೆದಿದ್ದು, ಶಾಲಾ ಮಕ್ಕಳ ಮನಸ್ಸಿನಲ್ಲಿ ಮತಿಯ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಸರ್ಕಾರದ ಸಾಧನೆಯೇ? ಇದೆಲ್ಲವೂ ಮನೆಹಾಳು ಕೆಲಸ. ಇದಕ್ಕೆ ಸಾಧನ ಸಮಾವೇಶ ಎಂದು ಕರೆದರೆ ಅದನ್ನು ಮನೆಹಾಳರು ಮಾತ್ರ ಒಪ್ಪಿಕೊಳ್ಳಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಸಮಾವೇಶ ಮಾಡುವ ಮೊದಲು ತಾವು ಏನು ಸಾಧನೆ ಮಾಡಿದ್ದೇವೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಬೋರ್ವೆಲ್ ಕೊರೆಯಿಸಲು ಹಣ ನೀಡಿಲ್ಲ. ಗುರು ಲಕ್ಷ್ಮಿ ಹಣವನ್ನು 10 ತಿಂಗಳು ನೀಡಿ ಎರಡು ತಿಂಗಳ ಹಣ ನುಂಗಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲೇ ಪ್ರಶ್ನೆ ಮಾಡಿದರೂ ಉತ್ತರ ನೀಡಿಲ್ಲ. ಈ ಸರ್ಕಾರ ಮಾಡಿರುವುದು ಲೂಟಿ ಹಾಗೂ ಅಧಿಕಾರ ದುರ್ಬಳಕೆ. ಇದಾವುದೂ ಸಾಧನೆಯಾಗಲು ಸಾಧ್ಯವಿಲ್ಲ ಎಂದರು.

ಬಡವರಿಗೆ ಎಷ್ಟು ಗೃಹ ಭಾಗ್ಯ ನೀಡಿದ್ದೇವೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಎಷ್ಟು ಮನೆ ನೀಡಿದ್ದೇವೆ. ರಾಜ್ಯದಲ್ಲಿ ಯಾವ ನೀರಾವರಿ ಯೋಜನೆ ಪೂರ್ಣಗೊಳಿಸಿದ್ದೇವೆ. ಉದ್ಯೋಗ ಸೃಷ್ಟಿ ಮಾಡುವ ಯಾವ ಯೋಜನೆ ಮಾಡಿದ್ದೇವೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಆರ್ ಎಸ್ ಎಸ್ ಟೀಕಿಸುವ ಗುಣಪಡಿಸಲಾಗದ ರೋಗವಿದೆ. ಈ ರೋಗವನ್ನು ನಿರ್ಲಕ್ಷ ಮಾಡುವುದೇ ಸೂಕ್ತ. ಈ ರೋಗಕ್ಕೆ ಪ್ರತಿಕ್ರಿಯಿಸಿದಷ್ಟು ಅದು ಕೆರಳುತ್ತದೆ. ಆದರ ಬದಲು ನಿರ್ಲಕ್ಷ್ಯ ಮಾಡಿದರೆ ರೋಗ ಶಮನವಾಗುತ್ತದೆ ಎಂದು ಲೇವಡಿ ಮಾಡಿದರು‌.

A meeting to prepare for the demolition of a house

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...