Home namma chikmagalur chikamagalur ಕಾಫಿಗೆ ಹೊಸ ಮಾರುಕಟ್ಟೆ ವ್ಯವಸ್ಥೆ ಹುಡುಕಬೇಕಿದೆ
chikamagalurHomeLatest Newsnamma chikmagalur

ಕಾಫಿಗೆ ಹೊಸ ಮಾರುಕಟ್ಟೆ ವ್ಯವಸ್ಥೆ ಹುಡುಕಬೇಕಿದೆ

Share
Share

ಚಿಕ್ಕಮಗಳೂರು: ಭಾರತದ ಕಾಫಿಗೆ ಜಾಗತಿಕ ಹಾಗೂ ದೇಶೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆಯನ್ನು ಹುಡುಕಬೇಕಿದೆ. ಸಂಶೋಧನೆಗಳು ಕೇವಲ ಬೆಳೆ, ತಳಿಗಳಿಗೆ ಸೀಮಿತವಾಗದೆ ಉತ್ತಮ ಮಾರುಕಟ್ಟೆ ಅನ್ವೇಷಣೆ ನಿಟ್ಟಿನಲ್ಲೂ ನಡೆಯಬೇಕಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಅಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಷಿ ಹೇಳಿದರು.

ಕಾಫಿ ಮಂಡಳಿ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವತಿಯಿಂದ ಇಂದು ನಡೆದ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ(ಸಿ.ಸಿ.ಆರ್.ಐ.)ಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಜಗತ್ತಿನಾದ್ಯಂತ ಭಾರತದ ಕಾಫಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಪ್ಯಾಕೇಜ್ ಜೊತೆಗೆ ಜಾಗತಿಕ ಮಾರುಕಟ್ಟೆಯನ್ನು ಅಧ್ಯಯನ ಮಾಡಿ ನಮ್ಮ ಕಾಫಿ ಹೆಚ್ಚು ದೇಶಗಳಿಗೆ ತಲುಪುವುದು ಹೇಗೆ ಎನ್ನುವ ಬಗ್ಗೆ ಚಿಂತನೆ ಮಾಡಬೇಕಿದೆ ಎಂದರು.

ಕಳೆದ ಹಲವಾರು ವರ್ಷಗಳಲ್ಲಿ ಅನೇಕ ರೀತಿಯ ಬೆಳವಣಿಗೆ ಕಾಫಿ ಕ್ಷೇತ್ರದಲ್ಲಿ ನಡೆದಿದ್ದರೂ ಭಾರತ ಜಾಗತಿಕ ಮಟ್ಟದಲ್ಲಿ ಶಕ್ತಿಶಾಲಿಯಾಗಿ ಬೆಳೆಯುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಕಾಫಿ ಮೇಲಿನ ಜಿಎಸ್‌ಟಿಯನ್ನು ಸಹ ಶೇ.೧೮ ರಿಂದ ಶೇ.೫ ಕ್ಕೆ ಕೇಂದ್ರ ಸರ್ಕಾರ ಇಳಿಸಿದೆ. ಜಿಎಸ್‌ಟಿ ಬರುವ ಮುಂಚೆ ಒಟ್ಟಾರೆ ಶೇ.೩೫ ರಷ್ಟು ತೆರಿಗೆ ಬೀಳುತ್ತಿತ್ತು. ಈಗ ಯಾವುದೇ ಆಹಾರ ಉತ್ಪನ್ನಗಳಿಗೆ ಕೇವಲ ಶೇ.೫ ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದರು.

ಇದರ ಜೊತೆಗೆ ಯುಕೆ ಸೇರಿದಂತೆ ಹಲವು ದೇಶಗಳ ಜೊತೆಗೆ ಮುಕ್ತ ವಾಣಿಜ್ಯ ಒಪ್ಪಂದ ಆಗಿದೆ.  ಭಾರತ ಜಾಗತಿಕ ಮಟ್ಟದಲ್ಲಿ ಶಕ್ತಿಯಾಗಿ ಬೆಳೆಯುತ್ತಿದೆ. ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆ ನಮ್ಮದಾಗಿದೆ. ಜಗತ್ತಿನ ನಾಲ್ಕನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿಯೂ ಭಾರತ ಹೊರಹೊಮ್ಮಿದೆ. ಕಳೆದ ೧೦ ವರ್ಷದಲ್ಲಿ ನಮ್ಮ ದೇಶದ ಒಟ್ಟು ವಾಣಿಜ್ಯ ವಹಿವಾಟು ದುಪ್ಪಟ್ಟಾಗಿದೆ. ಇದೇ ವೇಳೆ ಮೂಲ ಸೌಕರ್ಯಗಳಿಗಾಗಿ ಅತೀ ಹೆಚ್ಚು ಅನುದಾನ ನೀಡುತ್ತಿರುವ ದೇಶ ಯಾವುದಾದರೂ ಇದ್ದರೆ ಅದು ಭಾರತ ಎಂದರು.

ಸೌರ ವಿದ್ಯುತ್‌ಗೆ ಹೆಚ್ಚು ಪ್ರೋತ್ಸಾಹ ನೀಡಿದ ಪರಿಣಾಮ ೧೨ ರಿಂದ ೧೩ ರೂ. ಇದ್ದ ವಿದ್ಯುತ್ ಬೆಲೆ ಇಂದು ೨ ರಿಂದ ೨.೨೦ ರೂ.ಗೆ ಲಭ್ಯವಾಗುತ್ತಿದೆ. ಒನ್ ಗ್ರಿಡ್ ಒನ್ ನೇಷನ್ ಮಾಡಿದ ಪರಿಣಾಮ ರಾಜ್ಯಗಳ ನಡುವೆ ವಿದ್ಯುತ್ ಹಂಚಿಕೆ ಒಪ್ಪಂದ ನಡೆಯಲು ಸಾಧ್ಯವಾಗುತ್ತಿದೆ ಎಂದರು.

ಅನೇಕ ದೇಶಗಳ ಜೊತೆಗೆ ಮುಕ್ತ ವಾಣಿಜ್ಯ ಒಪ್ಪಂದವನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ದೇಶಗಳು ಚಹಾದಿಂದ ಕಾಫಿ ಕಡೆಗೆ ಒಲವು ತೋರಲಾರಂಭಿಸಿವೆ. ಈ ಕಾರಣಕ್ಕೆ ನಾವು ಉತ್ತಮ ಗುಣಮಟ್ಟದ ಕಾಫಿ, ಜೊತೆಗೆ ಉತ್ತಮ ಪ್ಯಾಕಿಂಗ್, ಪೆಸ್ಟಿಸೈಡ್ ಕಡಿಮೆ ಮಾಡಿ ಜಾಗತಿಕ ಮಟ್ಟದಲ್ಲಿ ನಮ್ಮ ಉತ್ಪನ್ನದ ಸ್ವೀಕಾರತೆಯನ್ನು ವಿಸ್ತರಿಸಬೇಕಿದೆ ಎಂದರು.

ನಮ್ಮ ಕೌಶಲ್ಯ, ಪ್ಯಾಕಿಂಗ್ ಮತ್ತು ಗುಣಮಟ್ಟ ಸುಧಾರಿಸಿಕೊಳ್ಳಬೇಕು. ೧೪ ಕಾರ್ಯತಂತ್ರದ ವಲಯಗಳಲ್ಲಿ ಭಾರತ ಸರ್ಕಾರ ಸುಮಾರು ೨ ಲಕ್ಷ ಕೋಟಿ ರೂ.ಗಳ ಹೂಡಿಕೆ ಮಾಡಿದೆ. ಆರಂಭದಲ್ಲಿ ಸುಮಾರು ೨೪ ಸಾವಿರ ಕೋಟಿ ರೂ.ಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಉತ್ಪಾದನೆ ಹೆಚ್ಚಾಗಿ ಉದ್ಯೋಗ ಸೃಷ್ಠಿ ಆಗುತ್ತಿದೆ. ಜಾಗತಿಕ ಮಟ್ಟದಲ್ಲಿ ಗುಣಮಟ್ಟವನ್ನೂ ಉಳಿಸಿಕೊಂಡಲ್ಲಿ ಬೇಡಿಕೆಯೂ ಹೆಚ್ಚಾಗಲಿದೆ ಎಂದು ಹೇಳಿದರು.

ತೀರಾ ಇತ್ತೀಚಿನ ದಿನಗಳವರೆಗೆ ನಾವು ಮೊಬೈಲ್‌ಗಳನ್ನು ಬೇರೆ ದೇಶಗಳಿಂದ ತರಿಸಿಕೊಳ್ಳಬೇಕಿತ್ತು. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಶೇ.೩೦ ರಷ್ಟು ಭಾರತದ ಮೊಬೈಲ್‌ಗಳು ಲಭ್ಯವಿದೆ. ಆರಂಭದಲ್ಲಿ ಕೇವಲ ಎರಡು ಕಂಪನಿಗಳು ಮಾತ್ರ ಮೊಬೈಲ್ ತಯಾರಿಸುತ್ತಿದ್ದರೆ ಇಂದು ೩೦೦ ಕ್ಕೂ ಹೆಚ್ಚು ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಹತ್ತು ವರ್ಷಕ್ಕೆ ಮೊದಲು ಇಡೀ ದೇಶದಲ್ಲಿ ೯೦ ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಇತ್ತು. ಇಂದು ೧.೫೫ ಲಕ್ಷ ಕಿ.ಮೀ. ಇದೆ. ಕರ್ನಾಟಕದಲ್ಲೇ ೩೦೦೦ ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ನಮ್ಮ ಸರ್ಕಾರ ಬಂದ ಮೇಲೆ ನಿರ್ಮಿಸಲಾಗಿದೆ ಎಂದರು.

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಮುಂದಿನ ಹತ್ತು ವರ್ಷದಲ್ಲಿ ಕಾಫಿ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಗುರಿ ತಲುಪಲು ನಿರಂತರ ಶ್ರಮ ಹಾಕಬೇಕಿದೆ ಎಂದು ತಿಳಿಸಿದರು. ಹವಾಮಾನ ವೈಪರೀತ್ಯಗಳು, ಕಾರ್ಮಿಕರ ಸಮಸ್ಯೆ, ವನ್ಯ ಪ್ರಾಣಿಗಳೊಂದಿಗಿನ ಸಂಘರ್ಷ ಎಲ್ಲದರ ಮಧ್ಯೆ ಬದುಕುತ್ತಿದ್ದೇವೆ. ನಮ್ಮ ಗುರಿ ತಲುಪಬೇಕೆಂದರೆ ಮೊದಲು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ  ಕೇಂದ್ರ ಸರ್ಕಾರ ಮತ್ತು ಕಾಫಿ ಮಂಡಳಿ ಗಮನಹರಿಸಿ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅಧ್ಯಯನಗಳನ್ನು ಇನ್ನಷ್ಟು ಹೆಚ್ಚಿಸಬೇಕು. ವಿಜ್ಞಾನಿಗಳಿಗೆ ಅಗತ್ಯ ಉತ್ತೇಜನ ನೀಡಬೇಕು ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (ಉಡುಪಿ-ಚಿಕ್ಕಮಗಳೂರು ಕ್ಷೇತ್ರ), ಶಾಸಕ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಮಾಜಿ ಸಚಿವರಾದ ಡಿ.ಎನ್.ಜೀವರಾಜ್, ಕೇಂದ್ರ ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ (ಪ್ಲಾಂಟೇಶನ್) ನಿತಿನ್‌ಕುಮಾರ್ ಯಾದವ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮತ್ತಿತರರು ಕಾರ್ಯಕ್ರಮದಲ್ಲಿಸದ್ದರು.
ಕಾಫಿ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಕೂರ್ಮಾರಾವ್ ಸ್ವಾಗತಿಸಿದರು.

A new market system needs to be found for coffee.

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...