Home namma chikmagalur chikamagalur ಎಸ್‌ಐಆರ್ ಹೆಸರಿನಲ್ಲಿ ಮತಗಳ್ಳತನದ ಹುನ್ನಾರ
chikamagalurHomeLatest Newsnamma chikmagalur

ಎಸ್‌ಐಆರ್ ಹೆಸರಿನಲ್ಲಿ ಮತಗಳ್ಳತನದ ಹುನ್ನಾರ

Share
Share

ಚಿಕ್ಕಮಗಳೂರು: ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಹೆಸರಿನಲ್ಲಿ ಮತಗಳನ್ನು ಕದಿಯುವ ಹುನ್ನಾರ ನಡೆಯುತ್ತಿದೆ ಎಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರಾಜ್ ಆರೋಪಿಸಿದರು.

ನಗರದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಭವನದಲ್ಲಿ ಭಾನುವಾರ ಎಸ್‌ಐಆರ್ ವಿರೋಧಿ ಜನಪರ ಸಂಘಟನೆ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ *‘ಎಸ್‌ಐಆರ್ ಮತಚಂಚಿತ ಸಂತ್ರಸ್ತರೊಂದಿಗೆ ಸಮಾಲೋಚನಾ ಸಭೆ’*ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಸ್‌ಐಆರ್‌ ಹೆಸರಿನಲ್ಲಿ ಬಿಜೆಪಿ ಮತಗಳನ್ನು ಕದಿಯುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕಾನೂನುಗಳನ್ನು ಜಾರಿಗೊಳಿಸಲಾಗಿದೆ ಎಂದು ದೂರಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ದೇಶದ ಜನರು ಜಾಗೃತರಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ನಡೆಸಬೇಕು ಎಂದರು.

‘ಗಣೇಶನ ವಿಸರ್ಜನೆ ಮುಗಿದಿದೆ; ಈಗ ಜ್ಞಾನೇಶನ ವಿಸರ್ಜನೆ ಮಾಡಬೇಕು’ ಎಂದು ಹೇಳಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಎಸ್‌ಐಆರ್‌ ಜಾರಿಯಾದ ಬಳಿಕ ನಡೆದ ಕೆಲವು ಚುನಾವಣೆಗಳ ಕುರಿತು ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಸುಪ್ರೀಂ ಕೋರ್ಟ್‌ ಪರಿಶೀಲನೆ ನಡೆಸುವ ಅಗತ್ಯವಿದ್ದು, ಬೀದಿ ಹೋರಾಟದ ಜತೆಗೆ ಕಾನೂನು ಹೋರಾಟವೂ ನಡೆಯಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ 1.8 ಕೋಟಿ ಮತದಾರರ ಹೆಸರು ಕೈಬಿಡಲಾಗುತ್ತಿದೆ ಎಂಬ ಆರೋಪ

ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ ಎಂದು ಪ್ರಕಾಶ್ ರಾಜ್ ಆರೋಪಿಸಿದರು. ಬಿಎಲ್‌ಒಗಳಿಗೆ ಸಮರ್ಪಕ ತರಬೇತಿ ನೀಡಿಲ್ಲ ಹಾಗೂ ಸಾರ್ವಜನಿಕರಿಗೆ ಎಸ್‌ಐಆರ್ ಕುರಿತು ಅಗತ್ಯ ಮಾಹಿತಿ ತಲುಪಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 1.8 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ ಅವರು, ಸುಮಾರು 43 ಲಕ್ಷ ಮತದಾರರನ್ನು ‘ಅನ್‌ಮ್ಯಾಪಿಂಗ್’ ಮಾಡಲಾಗಿದೆ ಎಂದು ಆರೋಪಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಮತ ಕಾವಲು ಸಮಿತಿ’ ಮೂಲಕ ಇಂತಹ ಹಲವು ಲೋಪಗಳನ್ನು ಗುರುತಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ದಾಖಲೆಗಳ ಸಹಿತ ಜನರ ಮುಂದಿಡಲಾಗುವುದು ಎಂದರು.

ಆದರೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಷ್ಟು ಅನರ್ಹರು, ನುಸುಳುಕೋರರು ಅಥವಾ ಇತರರು ಪತ್ತೆಯಾಗಿದ್ದಾರೆ ಎಂಬ ಮಾಹಿತಿಯನ್ನು ಚುನಾವಣಾ ಆಯೋಗ ನೀಡಿಲ್ಲ ಎಂದು ಅವರು ಪ್ರಶ್ನಿಸಿದರು.

ಸಾಕ್ಷ್ಯ ಸಂಗ್ರಹಿಸಿ ಕಾನೂನು ಹೋರಾಟಕ್ಕೆ ಕರೆ

ಎಸ್‌ಐಆರ್‌ ಹೆಸರಿನಲ್ಲಿ ಬಿಜೆಪಿ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ ಪ್ರಕಾಶ್ ರಾಜ್, “ಮತದಾರರ ಹಕ್ಕು ಮತ್ತು ಸಂವಿಧಾನವನ್ನು ರಕ್ಷಿಸಲು ಸಾರ್ವಜನಿಕರು ಮುಂದೆ ಬರಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಅನ್ಯಾಯಕ್ಕೊಳಗಾದವರು ದಾಖಲೆ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಾನೂನು ಹೋರಾಟಕ್ಕೆ ಸಹಕರಿಸಬೇಕು” ಎಂದು ಕರೆ ನೀಡಿದರು.

ಕರ್ನಾಟಕ ಮತ್ತೊಂದು ಪಶ್ಚಿಮ ಬಂಗಾಳವಾಗಬಾರದು. ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಎಸ್‌ಐಆರ್‌ನಿಂದ ಸಮಸ್ಯೆ ಎದುರಿಸಿದ್ದವರು ತಮ್ಮ ಅಹವಾಲುಗಳನ್ನು ಹಂಚಿಕೊಂಡರು. ಪ್ರಕಾಶ್ ರಾಜ್ ಅವರೊಂದಿಗೆ ಸಮಾಲೋಚನೆ ನಡೆಸಿ ತಮ್ಮಲ್ಲಿದ್ದ ಹಲವು ಗೊಂದಲಗಳನ್ನು ಪರಿಹರಿಸಿಕೊಂಡರು.

ಒಕ್ಕೂಟದ ಮುಖಂಡರಾದ ಕೆ.ಎಲ್. ಅಶೋಕ್, ಗೌಸ್ ಮೊಹಿದ್ದೀನ್, ಗಡಿಕಲ್ ಸುರೇಶ್, ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರಾದ ಜಿ. ವಿಜಯ್‌ಕುಮಾರ್, ಮರ್ಲೆ ಅಣ್ಣಯ್ಯ, ಸಫ್ವಾನಾ, ಮುಸ್ತಫಾ ಆಲ್ದೂರು, ಭೀಮಯ್ಯ, ಮೋಹನ್‌ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

A plot to steal votes in the name of ‘SIR’

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...

ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್‌ ಯಶಸ್ವಿ

ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...

Related Articles

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ...

ಭತ್ತದ ಗದ್ದೆಯಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಳಸ: ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಕಣ್ಣಿಗೆ ಸುಮಾರು 12 ಅಡಿ ಉದ್ದದ ಬೃಹತ್...

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ...

ಅಕ್ಟೋಬರ್ ೧ ರಿಂದ ವಿದ್ಯುತ್ ಪೂರೈಕೆ ಸುಧಾರಣೆ

ಚಿಕ್ಕಮಗಳೂರು: ಜಿಲ್ಲೆಯ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ...