Home namma chikmagalur chikamagalur ಫೇಸ್‌ಬುಕ್‌ ಜಾಹೀರಾತು ನಂಬಿ 2 ಲಕ್ಷ ರೂಪಾಯಿ ಕಳೆದುಕೊಂಡ ರಿಯಲ್ ಎಸ್ಟೇಟ್ ಉದ್ಯಮಿ
chikamagalurCrime NewsHomeLatest Newsnamma chikmagalur

ಫೇಸ್‌ಬುಕ್‌ ಜಾಹೀರಾತು ನಂಬಿ 2 ಲಕ್ಷ ರೂಪಾಯಿ ಕಳೆದುಕೊಂಡ ರಿಯಲ್ ಎಸ್ಟೇಟ್ ಉದ್ಯಮಿ

Share
Share

ಮೂಡಿಗೆರೆ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕಂಡ ಆಕರ್ಷಕ ಜಾಹೀರಾತನ್ನು ನಂಬಿ ವಸ್ತುಗಳನ್ನು ಖರೀದಿಸಲು ಮುಂದಾದ ಮೂಡಿಗೆರೆಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಹಂತ-ಹಂತವಾಗಿ ಬರೊಬ್ಬರಿ 2 ಲಕ್ಷ ರೂಪಾಯಿ ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.

ಮೂಡಿಗೆರೆ ಪಟ್ಟಣದ ಕುಮಾರ್ ಲೇಔಟ್ ನಿವಾಸಿ ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ಜಾಲಾಡುತ್ತಿದ್ದ ವೇಳೆ ಕಣ್ಣಿಗೆ ಬಿದ್ದ ಆನ್‌ಲೈನ್ ಮಾರಾಟದ ಜಾಹೀರಾತನ್ನು ನಂಬಿ, ‘ಶಿಲ್ಪಾ ಅರುಣ್’ ಎಂಬ ಫೇಸ್‌ಬುಕ್ ಖಾತೆಯೊಂದಿಗೆ ಚಾಟ್ ನಡೆಸಿದ್ದರು.

ವಸ್ತುಗಳನ್ನು ಕಳುಹಿಸಿಕೊಡುವ ಭರವಸೆ ನೀಡಿದ ಅಪರಿಚಿತ ವ್ಯಕ್ತಿಗಳು, ಇವರಿಂದ ವಿಳಾಸ ಪಡೆದು ವಿವಿಧ ಕಂತುಗಳಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಇಂಡಿಯಾದ ಖಾತೆಗಳಿಗೆ ಫೋನ್ ಮೂಲಕ ಒಟ್ಟು 2,00,000 ರೂಪಾಯಿಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಹಣ ಪಡೆದ ಬಳಿಕ ವಸ್ತುಗಳನ್ನು ಕಳುಹಿಸದೆ ದಿನ ದೂಡುತ್ತಾ ಬಂದ ಖದೀಮರು, ಕೊನೆಗೆ ಫೇಸ್‌ಬುಕ್ ಚಾಟ್ ಹಿಸ್ಮರಿ ಹಾಗೂ ಪ್ರೊಫೈಲ್ ಸಂಪರ್ಕವನ್ನೇ ರದ್ದುಗೊಳಿಸಿ ಸಂಪರ್ಕಕ್ಕೆ ಸಿಗದಂತೆ ಪರಾರಿಯಾಗಿದ್ದಾರೆ. ತಾವು ಮೋಸ ಹೋಗಿರುವುದು ತಡವಾಗಿ ಅರಿವಿಗೆ ಬರುತ್ತಿದ್ದಂತೆ ನೊಂದ ಉದ್ಯಮಿ ಸೈಬರ್ ಸಹಾಯವಾಣಿ 1930 ಗೆ ಕರೆ ಮಾಡಿ ದೂರು ದಾಖಲಿಸಿದ್ದು, ಬಳಿಕ ಚಿಕ್ಕಮಗಳೂರು ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಗೆ ಹಾಜರಾಗಿ ವಂಚಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಹಣ ವಾಪಸ್ ಕೊಡಿಸುವಂತೆ ಲಿಖಿತ ದೂರು ಸಲ್ಲಿಸಿದ್ದಾರೆ.

A real estate businessman who lost 2 lakh rupees by trusting a Facebook ad

Share

Leave a comment

Leave a Reply

Your email address will not be published. Required fields are marked *

Don't Miss

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು ಮಾರ್ಗದರ್ಶನ ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಅವರ ತತ್ವಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಕಾರ್ಯಾನ್ಮುಖರಾಗಬೇಕು ಎಂದು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ನ್ನು ಬರೋಬ್ಬರಿ 60 ಕಿ.ಮೀ. ದೂರ ಸುರಕ್ಷಿತವಾಗಿ ಚಲಾಯಿಸಿ ಪ್ರಯಾಣಿಕರ...

Related Articles

ತರೀಕೆರೆಯ ಆಫ್ರಿನ್‌ಗೆ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್

ತರೀಕೆರೆ: ಸಾಧನೆಗೆ ಜಾತಿ, ಧರ್ಮ, ಭಾಷೆಯ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿರುವ ತರೀಕೆರೆಯ ಪ್ರತಿಭಾವಂತೆ ನೈಯ್ಯರ್ ಫಾತೀಮಾ...

ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸೃಷ್ಠಿಯಾಗಿರುವ ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ...

ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು...

ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ೯.೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ...