Home namma chikmagalur chikamagalur ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ
chikamagalurHomeLatest Newsnamma chikmagalur

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

Share
Share

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕ ಯಲ್ಲಪ್ಪ (45) ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ಆರಂಭಿಸಿದೆ.

ನಾಲ್ಕು ದಿನಗಳ ಹಿಂದೆ (ಸೋಮವಾರ) ನಡೆದ ಈ ದುರಂತದ ನಂತರ ಸ್ಥಳೀಯ ರೈತರು ಮತ್ತು ನಿವಾಸಿಗಳು ಬಾಳೆಹೊನ್ನೂರು ಅರಣ್ಯ ಇಲಾಖೆಯ ಮುಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣವೇ ಆನೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ರೈತರ ಒತ್ತಡಕ್ಕೆ ಮಣೆದ ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಂಡಿದ್ದು, ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದಿಂದ ಐದು ಸಾಕಾನೆಗಳ ತಂಡವನ್ನು ಚಿಕ್ಕಮಗಳೂರಿಗೆ ಕರೆತರಲಾಗಿದೆ.

ಈ ತಂಡ ಇಂದು ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮಕ್ಕೆ ಆಗಮಿಸಿದೆ. ಐದು ಸಾಕಾನೆಗಳಲ್ಲಿ ಮೂರು ಆನೆಗಳನ್ನು ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಬಳಸಲು ಸರ್ಕಾರ ಆದೇಶಿಸಿದೆ. ಉಳಿದ ಎರಡು ಸಾಕಾನೆಗಳಿಗೆ ರೇಡಿಯೋ ಕಾಲರ್‌ಗಳನ್ನು ಅಳವಡಿಸಿ, ಅವುಗಳ ಚಲನವಲನವನ್ನು ಗಮನಿಸುವಂತೆ ಸೂಚನೆ ನೀಡಲಾಗಿದೆ.

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯಲ್ಲಪ್ಪ ಅವರು ಮನೆಗೆ ಹೋಗುವ ದಾರಿಯಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿ ತುಳಿದು ಕೊಂದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಮೂಲದ ಯಲ್ಲಪ್ಪ ಅವರು ನಾಗೇಶ್ ಗೌಡ ಅವರ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಲೆನಾಡಿನಲ್ಲಿ ಮಾನವ-ಕಾಡಾನೆ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಈ ಕಾರ್ಯಾಚರಣೆಯು ಸ್ಥಳೀಯರಲ್ಲಿ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆಯು ತ್ವರಿತವಾಗಿ ಕಾಡಾನೆಯನ್ನು ಸೆರೆ ಹಿಡಿದು ಸ್ಥಳೀಯರ ಸುರಕ್ಷತೆ ಖಾತರಿಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

A team of livestock arrives to capture a manipulative elephant

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...