Home namma chikmagalur chikamagalur ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ….?
chikamagalurHomeLatest Newsnamma chikmagalur

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ….?

Share
Share

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇತ್ತೀಚೆಗೆ ಹುಲಿಯೊಂದು ಉರುಳಿಗೆ ಬಿದ್ದ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೆರಡು ಹುಲಿಗಳು ಪತ್ತೆಯಾಗುವ ಮೂಲಕ ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಏಳುನೂರುಖಾನ್ ಎಸ್ಟೇಟ್ ಬಳಿ ನಿಗಾ ಇರಿಸಲು ಅಳವಡಿಸಿದ್ದ ಕ್ಯಾಮೆರಾಗಳಲ್ಲಿ ಈ ಎರಡು ಹುಲಿಗಳ ಚಲನವಲನಗಳು ಸ್ಪಷ್ಟವಾಗಿ ಸೆರೆಯಾಗಿವೆ. ಕಳೆದ ಶುಕ್ರವಾರ ಸಚಿವ ಕೆ.ಜೆ. ಜಾರ್ಜ್ ಅವರ ತೋಟದ ಸಮೀಪವೇ ಸೊಂಟದಲ್ಲಿ ಉರುಳು ಸಿಲುಕಿಸಿಕೊಂಡು ಓಡಾಡುತ್ತಿದ್ದ ಹುಲಿ ಮಾತ್ರ ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿಲ್ಲ, ಹಾಗೂ ಈ ಕ್ಯಾಮೆರಾಗಳಲ್ಲೂ ಸೆರೆಯಾಗಿಲ್ಲ.

ಇದರಿಂದಾಗಿ ಮುಳ್ಳಯ್ಯನಗಿರಿ ತಪ್ಪಲಿನ ಈ ಭಾಗದಲ್ಲಿ ಎರಡಲ್ಲ, ಒಟ್ಟು ಮೂರು ಹುಲಿಗಳು ಮುಕ್ತವಾಗಿ ಸಂಚರಿಸುತ್ತಿವೆ ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.

ಗಾಯಗೊಂಡಿರುವ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಈಗಾಗಲೇ ಬೋನ್ ಹಾಗೂ ಹೆಚ್ಚುವರಿ ಕ್ಯಾಮೆರಾಗಳನ್ನು ಅಳವಡಿಸಿ ಜಾಲ ಬೀಸಿದ್ದರೂ, ಈಗ ಬೇರೆ ಹುಲಿಗಳು ಕಾಣಿಸಿಕೊಂಡಿರುವುದು ಇಲಾಖೆಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಸುತ್ತಮುತ್ತಲಿನ ತೋಟಗಳಲ್ಲಿ ಹುಲಿಗಳ ಉಪಟಳ ಹೆಚ್ಚಾಗಿರುವುದರಿಂದ, ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯ ಕಾರ್ಮಿಕರು ಮತ್ತು ಗ್ರಾಮಸ್ಥರು ತೀವ್ರ ಭೀತಿಯಿಂದ ಹಿಂದೇಟು ಹಾಕುತ್ತಿದ್ದಾರೆ.

A tiger at the foothills of Mullaiyanagari…?

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...