Home namma chikmagalur ಕವಿಕಲ್ ಗಂಡಿ ಬಳಿ ಪ್ರವಾಸಿ ಕಾರೊಂದು ಪಲ್ಟಿ
namma chikmagalurchikamagalurCrime NewsHomeLatest News

ಕವಿಕಲ್ ಗಂಡಿ ಬಳಿ ಪ್ರವಾಸಿ ಕಾರೊಂದು ಪಲ್ಟಿ

Share
Share

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ, ಮಳೆಗೆ ದತ್ತಪೀಠದ  ಮಾರ್ಗದ ಕವಿಕಲ್ ಗಂಡಿ ಬಳಿ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಪ್ರವಾಸಿ ಕಾರೊಂದು ಪಲ್ಟಿಯಾಗಿದೆ.

ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ಕೊಡಲು ಹೋದ ಕಾರು, ಕಲ್ಲಿನ ಮೇಲೆ ಹತ್ತಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆ ಮಧ್ಯೆ ಕಾರು ಪಲ್ಟಿಯಾದ ಪರಿಣಾಮ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಸ್ತೆ ಮಧ್ಯೆ ಕಾರು ಪಲ್ಟಿಯಾಗುತ್ತಿದ್ದಂತೆ ಅಲ್ಲದೇ ಇದ್ದ ಪ್ರವಾಸಿಗರು ಪಲ್ಟಿಯಾದ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಐವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಪಲ್ಟಿ ಹೊಡೆದ ಪಕ್ಕದಲ್ಲಿ ಪ್ರಪಾತ ಇರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದೆ. ಮಲೆನಾಡಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಮಲೆನಾಡಿನಲ್ಲಿ ಸಂಚರಿಸುವ ಸ್ಥಳೀಯರು ಹಾಗೂ ಪ್ರವಾಸಿಗರು ತಿರುವಿನಲ್ಲಿ ವಾಹನಗಳನ್ನು ನಿಧಾನವಾಗಿ ಚಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

A tourist car overturned on a bend in the road near Kavikal Gandi after losing control.
Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...