Home namma chikmagalur chikamagalur ಕಾರ್ಮಿಕರ ನಡುವೆ ಮಾತಿನ ಚಕಮಕಿ ಭೀಕರ ಕೊಲೆಯಲ್ಲಿ ಅಂತ್ಯ
chikamagalurHomeLatest Newsnamma chikmagalur

ಕಾರ್ಮಿಕರ ನಡುವೆ ಮಾತಿನ ಚಕಮಕಿ ಭೀಕರ ಕೊಲೆಯಲ್ಲಿ ಅಂತ್ಯ

Share
Share

ಕಳಸ: ಕಾಫಿ ತೋಟದ ಲೇಬರ್ ಲೈನ್‌ನಲ್ಲಿ ವಾಸಿಸುತ್ತಿದ್ದ ಕಾರ್ಮಿಕರ ನಡುವೆ ಹಠಾತ್ತಾಗಿ ಪ್ರಾರಂಭವಾದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು, ಕೊನೆಯಲ್ಲಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಾರ್ಮಕ್ಕಿ ಸಮೀಪದ ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.

ಹಾವೇರಿ ಮೂಲದ ಭೀಮ (42) ಎಂಬುವವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅದೇ ವೇಳೆ, ರೊಚ್ಚಿಗೆದ್ದ ಆರೋಪಿಯು ಮತ್ತೊಬ್ಬ ಕಾರ್ಮಿಕನ ಮೇಲೆಯೂ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.

ಘಟನೆ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಫಕೀರಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಾಯ್ಕಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದೆ.

ಶಾಂತಿಯುತವಾಗಿದ್ದ ಎಸ್ಟೇಟ್ ವಾತಾವರಣದಲ್ಲಿ ದಿಢೀರನೆ ಇಷ್ಟೊಂದು ಭೀಕರ ಕೃತ್ಯ ನಡೆಯಲು ಕಾರಣವೇನು ಹಾಗೂ ಈ ರಕ್ತಸಿಕ್ತ ಜಗಳದ ಹಿಂದಿರುವ ನೈಜ ಹಿನ್ನೆಲೆಯೇನು ಎಂಬುದು ಪೊಲೀಸರ ತೀವ್ರ ತನಿಖೆಯಿಂದ ಹೊರಬರಬೇಕಾಗಿದೆ.

A verbal altercation between workers ended in a gruesome murder

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...