Home namma chikmagalur chikamagalur ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ
chikamagalurHomeLatest Newsnamma chikmagalur

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಕುಣಿಗಲ್‌ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಇಬ್ಬರೂ ಡೆತ್‌ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇಬ್ಬರೂ ರಕ್ತಸಂಬಂಧ ಹೊಂದಿಲ್ಲದಿದ್ದರೂ ಅಕ್ಕ-ತಮ್ಮನ ರೀತಿಯಲ್ಲಿ ಅನ್ಯೋನ್ಯವಾಗಿದ್ದರು ಎನ್ನಲಾಗಿದ್ದು, ಅವರ ಒಡನಾಟಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು ಪ್ರೀತಿಯ ಸಂಬಂಧದ ಬಣ್ಣ ನೀಡಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೃತರು ಬರೆದಿಟ್ಟಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ತಮ್ಮ ಸಂಬಂಧಕ್ಕೆ ಕಳಂಕ ಹಚ್ಚದಂತೆ ಮನವಿ ಮಾಡಿದ್ದಾರೆ. ತಾವು ರಕ್ತಸಂಬಂಧಿಗಳಲ್ಲದಿದ್ದರೂ ಯಾವುದೇ ಭೇದಭಾವವಿಲ್ಲದೆ ಸಹೋದರ-ಸಹೋದರಿಯಂತೆ ಇದ್ದೆವು. ಆದರೆ ತಮ್ಮ ಸಂಬಂಧವನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲವರು ಮಾತನಾಡುತ್ತಿದ್ದರಿಂದ ಮಾನಸಿಕವಾಗಿ ನೊಂದಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿಯೂ ತಮ್ಮ ಸಂಬಂಧಕ್ಕೆ ಬೆಂಬಲ ಸಿಗಲಿಲ್ಲ. ತಮ್ಮ ಅನ್ಯೋನ್ಯತೆಯನ್ನು ಕೆಲವರು ಸಹಿಸದೆ ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಒಟ್ಟಿಗೆ ಬದುಕಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಒಟ್ಟಿಗೆ ಸಾಯಲು ನಿರ್ಧರಿಸಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಇಬ್ಬರೂ ಮೃತಪಟ್ಟ ಬಳಿಕ ತಮ್ಮ ಅಂತ್ಯಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಪಕ್ಕಪಕ್ಕದಲ್ಲೇ ನಡೆಸಬೇಕು. ಇದರಿಂದ ತಮಗೆ ನೆಮ್ಮದಿ ಸಿಗುತ್ತದೆ ಎಂಬ ಕೊನೆಯ ಮನವಿಯನ್ನೂ ಡೆತ್‌ನೋಟ್‌ನಲ್ಲಿ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಬೆಳೆದು ನಿಂತಿದ್ದ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

A young man and woman hurt by slander commit suicide by getting hit by a train

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಚಿರತೆ ಮರಿಗಳೆಂದು ಆತಂಕ; ಪತ್ತೆಯಾಗಿದ್ದು ಕಾಡು ಬೆಕ್ಕಿನ ಮರಿಗಳು

ಕಳಸ: ಮರಸಣಿಗೆ ವ್ಯಾಪ್ತಿಯ ಗುಮ್ಮನ್ ಖಾನ್ ಬಳಿ ತೋಟದ ಪಕ್ಕದಲ್ಲಿ ಚಿರತೆ ಮರಿಗಳು ಪತ್ತೆಯಾಗಿವೆ ಎಂಬ...