Home namma chikmagalur chikamagalur ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ
chikamagalurHomeLatest Newsnamma chikmagalur

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

Share
Share

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕೋಲಾರ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ಒಂಬತ್ತು ಮಂದಿ ಗೆಳೆಯರ ತಂಡದಲ್ಲಿ ಒಬ್ಬರಾಗಿದ್ದ ಸಂತೋಷ್(೨೭) ಎಂಬ ಯುವಕ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಭಾರಿ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಈ ಘಟನೆಯನ್ನು ಕಂಡು ಅವರ ಜೊತೆಯಲ್ಲಿದ್ದ ಸಹಯಾತ್ರಿಗಳು ತೀವ್ರ ಆತಂಕಗೊಂಡಿದ್ದು, ಕೂಡಲೇ ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಲ್ಲಿ ಯುವಕನಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸುಂದರ ಪ್ರವಾಸಿ ತಾಣವನ್ನು ನೋಡಲು ಬಂದಿದ್ದ ಯುವಕರ ತಂಡದಲ್ಲಿ ಇಂತಹ ಅನಿರೀಕ್ಷಿತ ಘಟನೆ ನಡೆದಿರುವುದು ಎಲ್ಲರಲ್ಲೂ ವಿಷಾದ ಮೂಡಿಸಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು, ಯುವಕನ ಪತ್ತೆಯಾದ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ನದಿಯ ಸೆಳೆತ ಹೆಚ್ಚಿರುವ ಕಾರಣ ಶೋಧ ಕಾರ್ಯಕ್ಕೆ ಅಲ್ಪ ಅಡ್ಡಿಯಾಗಿದ್ದರೂ, ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

A young man who had gone for a bath goes missing in a lake.

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...

ಅಕ್ರಮವಾಗಿ ಸಾಕುತ್ತಿದ್ದ ಕಾಡುಗಿಳಿಗಳ ವಶ

ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು...