ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಬ್ಯಾಕ್ವಾಟರ್ನಲ್ಲಿ ನಡೆದಿದೆ.
ಮೃತ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ನಿಖಿಲ್ ಆರ್. ಸಿಂಗ್ (23) ಎಂದು ಗುರುತಿಸಲಾಗಿದೆ.
ನಿಖಿಲ್ ನಿನ್ನೆ ಸಂಜೆ ಇಬ್ಬರು ಸ್ನೇಹಿತರೊಂದಿಗೆ ಪಾರ್ಟಿ ನಡೆಸಿ ಬಳಿಕ ಭೈರನಕಟ್ಟೆ ಸಮೀಪದ ಭದ್ರಾ ಬ್ಯಾಕ್ವಾಟರ್ಗೆ ಈಜಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಶೋಧ ಕಾರ್ಯಾಚರಣೆ ನಡೆಸಿ ಬ್ಯಾಕ್ವಾಟರ್ನಿಂದ ನಿಖಿಲ್ನ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
A young man who had gone swimming drowned and died.
Leave a comment