Home namma chikmagalur chikamagalur ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು
chikamagalurCrime NewsHomeLatest Newsnamma chikmagalur

ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು

Share
Share

ಚಿಕ್ಕಮಗಳೂರು: ಕಾರು ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಬೆಂಗಳೂರಿನ ಕಾರ್ ಚಾಲಕ ಯಶ್ವಂತ್ ಎಂಬ ಯುವಕನು ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ದುರದೃಷ್ಟಕರ ಘಟನೆ ಸಕ್ಕರಾಯಪಟ್ಟಣ ಠಾಣಾ ವ್ಯಾಪ್ತಿಯ ಹಿರೇಗೌಜ ಗೇಟ್ ಬಳಿ ಸಂಭವಿಸಿದೆ.

ಹಾಸನ ವಿಜಯನಗರ ಬಡಾವಣೆಯ ನಿವಾಸಿ ರೂಪಾ ಎಂಬುವರ ಪುತ್ರ ಯಶ್ವಂತ್ ಬೆಂಗಳೂರಿನಲ್ಲಿ ಕಾರ್ ಡ್ರೈವಿಂಗ್ ಕೆಲಸ ಮಾಡುತ್ತಿದ್ದನು. ತಾನು ಈ ಹಿಂದೆ ಅಜ್ಜಂಪುರದ ವ್ಯಕ್ತಿಯೊಬ್ಬರಿಗೆ ನೀಡಿದ್ದ ಕಾರಿನ ಲೋನ್ ಮೊತ್ತವನ್ನು ಅವರು ಎರಡು ತಿಂಗಳಿನಿಂದ ಪಾವತಿಸದ ಕಾರಣ, ಆ ಕಾರನ್ನು ವಾಪಸ್ ತರಲು ಅಜ್ಜಂಪುರಕ್ಕೆ ಹೋಗುತ್ತಿರುವುದಾಗಿ ತಾಯಿಗೆ ತಿಳಿಸಿದ್ದನು.

ತಡರಾತ್ರಿ ಬಸ್ ಇಲ್ಲದ ಕಾರಣ ಸಖರಾಯಪಟ್ಟಣದ ನಯರಾ ಪೆಟ್ರೋಲ್ ಬಂಕ್ ಬಳಿ ಆತ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಕೆಎ-17 ಎಎ-1694 ನಂಬರಿನ ಮಹೀಂದ್ರ ಜಿತೋ ಗೂಡ್ಸ್‌ ವಾಹನವು ಯಶ್ವಂತನಿಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ತೀವ್ರ ರಕ್ತಸ್ರಾವ ಗೊಂಡಿದ್ದ ಆತನನ್ನು ಅಂಬುಲೆನ್ಸ್ ಚಾಲಕ ವಿನಯ್ ಅವರು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಿಸದೆ ಯಶ್ವಂತ್ ಕೊನೆಯುಸಿರೆಳೆದಿದ್ದಾನೆ. ಮೃತನ ತಾಯಿ ರೂಪಾ ನೀಡಿದ ದೂರಿನ ಮೇರೆಗೆ ಜಿತೋ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

A young man who had gone to collect loan dues died in a road accident.

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...