Home namma chikmagalur chikamagalur ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಹೋದ ಯುವಕ ನಾಪತ್ತೆ
chikamagalurHomeLatest Newsnamma chikmagalur

ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಹೋದ ಯುವಕ ನಾಪತ್ತೆ

Share
Share

ತರೀಕೆರೆ: ತಾಯಿಗೆ ಆಶಾಕಿರಣವಾಗಿದ್ದ ಮಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಶೀದಾ ಅವರ ಏಕೈಕ ಪುತ್ರ, 23 ವರ್ಷದ ಸಾದಿಕ್ ನಾಪತ್ತೆಯಾದ ಯುವಕ.

ವಿದ್ಯಾಭ್ಯಾಸ ಮುಗಿಸಿಕೊಂಡು ತಾಯಿಯ ಜೊತೆಯಲ್ಲೇ ಇದ್ದ ಸಾದಿಕ್ ಜೂನ್ 1ರಂದು ಮನೆಯಿಂದ ಹೊರಟವನು ಮರಳಿ ಬಂದಿಲ್ಲ. ಅಂದು ಮಧ್ಯಾಹ್ನ ತಾಯಿ ರಶೀದಾ ಸಂಬಂಧಿಕರ ಮದುವೆ ಮುಗಿಸಿಕೊಂಡು ಬಂದಾಗ ಮನೆಗೆ ಬೀಗ ಹಾಕಲಾಗಿತ್ತು.

ತಕ್ಷಣ ಮಗನ ಮೊಬೈಲ್‌ಗೆ ಕರೆ ಮಾಡಿದಾಗ, ಆತನ ಸ್ನೇಹಿತ ಮುಸ್ಪೀರ್ ಕರೆ ಸ್ವೀಕರಿಸಿ ಮಾತನಾಡಿದ್ದನು. ನಾವಿಬ್ಬರೂ ನಮ್ಮ ಪರಿಚಿತ ಸ್ನೇಹಿತರ ಮದುವೆ ಪತ್ರಿಕೆ ಹಂಚಲು ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಮುಸ್ಪೀರ್ ತಾಯಿಗೆ ತಿಳಿಸಿದ್ದನು. ಆದರೆ ಇದಾದ ಕೆಲವೇ ಸಮಯದಲ್ಲಿ ಸಾದಿಕ್ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ.

ಮಗ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ತಾಯಿ, ಅಕ್ಕಪಕ್ಕದವರು ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಮಗನನ್ನು ಪತ್ತೆಹಚ್ಚಿಕೊಡುವಂತೆ ಲಕ್ಕವಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕನ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

A young man who went to distribute a friend’s wedding newspaper goes missing

Share

Leave a comment

Leave a Reply

Your email address will not be published. Required fields are marked *

Don't Miss

ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ವ್ಯಕ್ತಿ

 ಕಡೂರು:  ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರೈತ ಸ್ವಾಭಿಮಾನ ಸಮಾವೇಶದಲ್ಲಿ ಯಾವುದೇ ಶಾಶ್ವತ ನೀರಾವರಿ ಯೋಜನೆ ಬಗ್ಗೆ ಆಗಲಿ, ಬರಗಾಲದಿಂದ ಉಂಟಾಗಿರುವ...

ಹರಿಹರಪುರದಲ್ಲಿ ಮನೆ ಕಳ್ಳತನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಅಪಹರಣ

ಕೊಪ್ಪ: ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ ಸುಮಾರು ₹2 ಲಕ್ಷ ಮೌಲ್ಯದ 24 ಗ್ರಾಂ ತೂಕದ ಚಿನ್ನದ ಸರ ಹಾಗೂ ₹600 ನಗದು ಕಳವು ಮಾಡಿರುವ...

Related Articles

ಸ್ಟಿಂಗ್ ಆಪರೇಷನ್ ಮುಂದೆ ಬರಗಾಲ ಮರೆತ ಜನಪ್ರತಿನಿಧಿಗಳು

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ದಿನವೂ ರಣ,ರಣ ಸುದ್ದಿ ಮಾಡುತ್ತಿದೆ. ಸಿದ್ದರಾಮಯ್ಯ ನಂತಹ ಮಾಸ್ ಲೀಡರ್ ಸಿಡಿ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಷೇಧಿತ ಪಟಾಕಿಗಳ ಮಾರಾಟ ನಿಷೇಧ

ಚಿಕ್ಕಮಗಳೂರು: ಜಿಲ್ಲೆಯಲ್ಲಿ 2026ನೇ ಸಾಲಿನ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಹಾಗೂ ಮಾನ್ಯ ಸರ್ವೋಚ್ಚ...

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ...