Home namma chikmagalur ರಕ್ಷಣೆ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಯುವಕ
namma chikmagalurchikamagalurHomeLatest News

ರಕ್ಷಣೆ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಯುವಕ

Share
Share

ಚಿಕ್ಕಮಗಳೂರು: ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿದ್ದ ವ್ಯಕ್ತಿಯೋರ್ವನನ್ನು ರಕ್ಷಣೆ ಮಾಡಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಸಾದರಹಳ್ಳಿ ಗ್ರಾಮದ ಯತೀಶ್ (೨೫) ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕನಾಗಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿರುವ ಸ್ಮಶಾನದ ಹಳ್ಳ ತುಂಬಿ ರಸ್ತೆ ಮೇಲೆ ಹರಿಯುತ್ತಿದೆ.

ಪೊಲೀಸರು ಬ್ಯಾರಿಕೇಡ್ ಇಟ್ಟು ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮುಂಜಾಗ್ರತಾ ಕ್ರಮಕೈಗೊಂಡಿದ್ದರು.

ಯತೀಶ್ ಹಾಗೂ ಆತನ ಸ್ನೇಹಿತ ಬೈಕ್‌ನಲ್ಲಿ ಈ ರಸ್ತೆಯ ಮೇಲೆ ಹೋಗಿದ್ದು, ರಸ್ತೆಯ ಮೇಲೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಬೈಕ್ ದಾಟಿಸಲು ಹೋದ ವೇಳೆ ಸವಾರ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾನೆ,

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಸ್ನೇಹಿತನ ರಕ್ಷಣೆ ಮಾಡಲು ಯತೀಶ್ ಮುಂದಾದ ವೇಳೆ ನಿಯಂತ್ರಣ ತಪ್ಪಿಹಳ್ಳಕ್ಕೆ ಬಿದ್ದಿದ್ದು, ಆತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಯತೀಶ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.

A young man who went to rescue and was swept away in the water

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....