Home namma chikmagalur chikamagalur ಡಿ.ಎನ್.ಜೀವರಾಜ್ ರಿಂದ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕಾರ
chikamagalurHomeLatest Newsnamma chikmagalur

ಡಿ.ಎನ್.ಜೀವರಾಜ್ ರಿಂದ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕಾರ

Share
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಿ.ಎನ್‌.ಜೀವರಾಜ್ ಆಯ್ಕೆಯಾದರು. ಚುನಾವಣಾಧಿಕಾರಿ ಗೌತಮ್ ಕುಮಾ‌ರ್ ಶೆಟ್ಟಿ ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರವನ್ನು ಸೋಮವಾರ ಡಿ.ಎನ್.ಜೀವರಾಜ್ ಅವರಿಗೆ ಹಸ್ತಾಂತರಿಸಿದರು.

ಶನಿವಾರ ನಡೆದಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಡಿ.ಎನ್.ಜೀವರಾಜ್ ಅವರು ಟಿ.ಡಿ.ರಾಜೇಗೌಡಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ, ಅಂದು ಅಧಿಕೃತ ಘೋಷಣೆ ಮಾಡಿರಲಿಲ್ಲ. ಹೈಕೋರ್ಟ್ ಗೆ ಮರು ಎಣಿಕೆಯ ವರದಿ ಸಲ್ಲಿಸುವುದಾಗಿ ಚುನಾವಣಾ ಅಧಿಕಾರಿಗಳು ಹೇಳಿಕೆ ನೀಡಿದ್ದರು.

ಭಾನುವಾರ ತಡರಾತ್ರಿ ಚುನಾವಣಾ ಅಧಿಕಾರಿಗಳು ಡಿ.ಎನ್‌.ಜೀವರಾಜ್ ಅವರಿಗೆ ಅಧಿಕೃತ ಘೋಷಣಾ ಪತ್ರವನ್ನು ಇಮೇಲ್ ಮೂಲಕ ಕಳಿಸಿದ್ದರು. ಸೋಮವಾರ ಬೆಳಿಗ್ಗೆ ಡಿ.ಎನ್.ಜೀವರಾಜ್ ಅವರಿಗೆ ಚುನಾವಣಾಧಿಕಾರಿಗಳು ಶಾಸಕರಾಗಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ನೀಡಿದರು. ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್.ಜೀವರಾಜ್ ಆಯ್ಕೆಯಾಗಿದ್ದಾರೆ.

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಿಜೆಪಿಯನ್ನು ಕ್ಲೀನ್‌ಸ್ವಿಪ್ ಮಾಡಿ ಐದು ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿತ್ತು. ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ, ಮೂಡಿಗೆರೆ ಕ್ಷೇತ್ರದಿಂದ ನಯನ ಮೋಟಮ್ಮ, ಶೃಂಗೇರಿ ಕ್ಷೇತ್ರದಿಂದ ಟಿ.ಡಿ.ರಾಜೇಗೌಡ, ಕಡೂರು ಕ್ಷೇತ್ರದಿಂದ ಕೆ.ಎಸ್.ಆನಂದ್ ಹಾಗೂ ತರೀಕೆರೆ ಕ್ಷೇತ್ರದಿಂದ ಜಿ.ಎಚ್.ಶ್ರೀನಿವಾಸ್ ಅವರು ಆಯ್ಕೆಯಾಗಿದ್ದರು.

ಐದು ಕ್ಷೇತ್ರಗಳಲ್ಲಿ ಸಂಪೂರ್ಣ ಸೋಲು ಅನುಭವಿಸಿದ್ದ ಬಿಜೆಪಿ ಮುಖಭಂಗಕ್ಕೆ ಒಳಗಾಗಿತ್ತು. ಆದರೆ, ಡಿ.ಎನ್‌.ಜೀವರಾಜ್ ಅವರ ಮೂರು ವರ್ಷಗಳ ಕಾನೂನು ಹೋರಾಟದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಸ್ಥಾನವನ್ನು ಕಾಂಗ್ರೆಸ್ ಪಕ್ಷ ಕಳೆದು ಕೊಂಡಿದ್ದು, ಐದು ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಕುಸಿದಿದೆ.

Acceptance of certificate of MLA seat from D.N. Jeevaraj

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...