ಚಿಕ್ಕಮಗಳೂರು : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬಸ್ಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳಸ ತಾಲೂಕಿನ ಕಗ್ಗನಾಳ ಬಳಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ ಹೊರನಾಡಿ ನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಢಿಕ್ಕಿ ನಡೆದಿದೆ. ಕಗ್ಗನಾಳ ಬಳಿಯ ಕಿರುಸೇತುವೆ ಸಮೀಪವೇ ಈ ಅಪಘಾತ ನಡೆದಿದೆ.
ಆಕ್ಸಿಡೆಂಟ್ ಸಂಭವಿಸಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕಳಸ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಿದ್ದಾರೆ ಕಳಸ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಿಸಲಾಗಿದೆ
Leave a comment