Home namma chikmagalur chikamagalur ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಅಪಘಾತ-ಬಾಲಕಿ ಸಾವು
chikamagalurHomeLatest Newsnamma chikmagalur

ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಅಪಘಾತ-ಬಾಲಕಿ ಸಾವು

Share
Share

ಚಿಕ್ಕಮಗಳೂರು: ನಗರದ  ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಭಾರೀ ಅಚಾತುರ್ಯ ಸಂಭವಿಸಿ ದುರ್ಘಟನೆ ನಡೆದಿದೆ. ಮದ್ಯಪಾನ ಮಾಡಿಕೊಂಡಿದ್ದರೆಂದು ಶಂಕಿಸಲಾದ ಕಾರು ಚಾಲಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಕಾರು ಹರಿಸಿದ ಪರಿಣಾಮ 7 ವರ್ಷದ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಹಾಸನದ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಸೇರಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಕಾರು ಚಾಲಕ ಸುಧಾಕರ್‌ರನ್ನು ಸ್ಥಳೀಯರು ಹಿಡಿದು ಥಳಿಸಿರುವ ಆರೋಪ ಕೇಳಿಬಂದಿದೆ. ಈ ವೇಳೆ ಕಾರಿನಲ್ಲಿ ಇದ್ದ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಗಾಯಗೊಂಡ ಚಾಲಕನನ್ನು ಸ್ಥಳೀಯರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಜನರು ಕಾರಿನ ಗಾಜುಗಳನ್ನು ಪುಡಿ-ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಚಾಲಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲು ಸಜ್ಜಾಗಿದ್ದರೆಂಬ ಆರೋಪಕ್ಕೂ ಆಕ್ರೋಶ ವ್ಯಕ್ತವಾಯಿತು. “ಚಾಲಕ ಚೆನ್ನಾಗಿದ್ದಾನೆ, ಮೊದಲು ಗಾಯಾಳುಗಳ ಕಡೆ ಗಮನ ಹರಿಸಿ” ಎಂದು ಸಾರ್ವಜನಿಕರು ಕಿಡಿಕಾರಿದರು.

ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟರು. ಆದರೂ ಆಕ್ರೋಶಿತರನ್ನು ಸಮಾಧಾನಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಎಎಸ್ಪಿ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮೃತ ಬಾಲಕಿಯ ಪೋಷಕರು ಹಾಗೂ ಸಾರ್ವಜನಿಕರು ಆಕ್ರಂದನ ವ್ಯಕ್ತಪಡಿಸಿದರು.

ಆಕ್ರೋಶಿತರನ್ನು ಸಮಾಧಾನಪಡಿಸಲು ಎಎಸ್ಪಿ ಕೈಮುಗಿದು ಮನವಿ ಮಾಡಿಕೊಂಡು ಸ್ಥಳದಿಂದ ತೆರಳುವಂತೆ ಹೇಳಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Accident on Ambedkar Jayanti procession- girl dies

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...