ಚಿಕ್ಕಮಗಳೂರು: ಕಳ್ಳತನ ನಡೆದು ಕೆಲವೆ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಆರ್.ಜಿ.ರಸ್ತೆಯ ಮೆಸ್ಕಾಂ ಕಚೇರಿ ಎದುರಿನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಹೆದರಿಸಿ ಅವರ ಕುತ್ತಿಗೆಯಲ್ಲಿದ್ದ ೪೫ ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣದ ಆರೋಪಿಗಳಾದ ನಗರದ ಅರವಿಂದ ನಗರದ ಹೇಮಂತ್‌ಕುಮಾರ್, ಟಿಪ್ಪುನಗರದ ಆಲಂ ಖಾನ್ ಅವರನ್ನು ಬಂಧಿಸಿ, ಬಂಧಿತರಿಂದ ೪೫ ಗ್ರಾಂ ಚಿನ್ನದ ಮಾಂಗಲ್ಯ ಸರ ಅಂದಾಜು ಮೌಲ್ಯ ೩, ೪೦,೦೦೦ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣ ನಡೆದು ೨೪ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಶ್ಲಾಘಿಸಿದ್ದಾರೆ.
Accused arrested within hours of theft
Leave a comment