Home namma chikmagalur ಕಳ್ಳತನ ನಡೆದು ಕೆಲವೆ ಗಂಟೆಗಳಲ್ಲಿ ಆರೋಪಿಗಳ ಬಂಧನ
namma chikmagalurchikamagalurHomeLatest News

ಕಳ್ಳತನ ನಡೆದು ಕೆಲವೆ ಗಂಟೆಗಳಲ್ಲಿ ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಕಳ್ಳತನ ನಡೆದು ಕೆಲವೆ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಆರ್.ಜಿ.ರಸ್ತೆಯ ಮೆಸ್ಕಾಂ ಕಚೇರಿ ಎದುರಿನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಹೆದರಿಸಿ ಅವರ ಕುತ್ತಿಗೆಯಲ್ಲಿದ್ದ ೪೫ ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣದ ಆರೋಪಿಗಳಾದ ನಗರದ ಅರವಿಂದ ನಗರದ ಹೇಮಂತ್‌ಕುಮಾರ್, ಟಿಪ್ಪುನಗರದ ಆಲಂ ಖಾನ್ ಅವರನ್ನು ಬಂಧಿಸಿ, ಬಂಧಿತರಿಂದ ೪೫ ಗ್ರಾಂ ಚಿನ್ನದ ಮಾಂಗಲ್ಯ ಸರ ಅಂದಾಜು ಮೌಲ್ಯ ೩, ೪೦,೦೦೦ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣ ನಡೆದು ೨೪ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಶ್ಲಾಘಿಸಿದ್ದಾರೆ.

Accused arrested within hours of theft

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...