Home Latest News ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ
Latest NewschikamagalurHomenamma chikmagalur

ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ

Share
Share

ಮೂಡಿಗೆರೆ: ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಎಸ್ಟೇಟ್ ಕಾಫಿ ತೋಟದೊಳಗೆ ಗುರುವಾರ ಮಧ್ಯಾಹ್ನ ಜಾನುವಾರು ಹತ್ಯೆಯಾಗಿ ಮಾಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ ೯ರಂದು ಮಧ್ಯಾಹ್ನ ೩:೩೦ ರಿಂದ ಸಂಜೆ ೭:೩೦ ರ ಒಳಗೆ ಯಾರೋ ಅಪರಿಚಿತ ವ್ಯಕ್ತಿಗಳು ತೋಟದೊಳಗೆ ಒಂದು ಜಾನುವಾರುವನ್ನು (ಹಸು) ಹತ್ಯೆ ಮಾಡಿ ಮಾಂಸ ಮಾಡಿರುವುದು ಕಂಡು ಬಂದಿದೆ. ಜಾನುವಾರುವಿನ ತಲೆ, ಕಾಲುಗಳು, ಚರ್ಮ, ಮಾಂಸ, ಲಿವರ್, ಇತರೆ ಅಂಗಾಂಗಗಳು ಸ್ಥಳದಲ್ಲೇ ಪತ್ತೆಯಾಗಿವೆ.

ಸ್ಥಳ ಪರಿಶೀಲನೆಗೆ ಆಗಮಿಸಿದ ಬಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರ ಮಾಹಿತಿ ಪ್ರಕಾರ, ತೋಟದ ರೈಟರ್ ಅಭಿಲಾಷ್ ಅವರ ಹೇಳಿಕೆಯಂತೆ, ಅಸ್ಸಾಂ ಮೂಲದ ಸುಮಾರು ೧೫ ಮಂದಿ ಕೂಲಿ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತೋಟದ ಲೈನ್‌ನಲ್ಲಿ ವಾಸವಿದ್ದು, ಘಟನೆಯ ಸಮಯದಲ್ಲಿ ಕೆಲವರು ತೋಟದೊಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಮಾಂಸ ತಯಾರಿಸಲು ಮರದ ತುಂಡು ಹಾಗೂ ಅಂಗಾಂಗಗಳನ್ನು ಹೂಳಲು ಬಳಸಿದ ಗುದ್ದಲಿ ಸ್ಥಳದಲ್ಲಿ ಪತ್ತೆಯಾಗಿದೆ.

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್, ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಬಂಧಿತ ಆರೋಪಿಗಳು ಜಾನುವಾರುವಿನ ಅಂಗಾಂಗಗಳನ್ನು ಪಶುವೈದ್ಯರ ಸಹಾಯದಿಂದ ಪರೀಕ್ಷಿಸಿ, ನಂತರ ಉಪ ವಿಭಾಗೀಯ ದಂಡಾಧಿಕಾರಿಗಳ ಅನುಮತಿಯನ್ನು ಪಡೆದು ನಾಶಪಡಿಸಲಾಯಿತು. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ೩೦೩(೨) ಬಿ.ಎನ್.ಎಸ್ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ೨೦೨೦ರ ಕಲಂ ೧೨(೧) ಅನ್ವಯ ಪ್ರಕರಣ ದಾಖಲಾಗಿದೆ.

Accused of killing cattle in Merkel farm arrested

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...