Home namma chikmagalur chikamagalur ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ಕಾರಿ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಎಡಿಎಲ್ಆರ್ (ADLR) ಮಂಜೇಶ್ ಹಾಗೂ ಕೇಸ್ ವರ್ಕರ್ ಸುಮಾ ಅವರು ರೈತ ಡಿ.ಡಿ. ಮಂಜುನಾಥ್ ಅವರ ಜಮೀನಿನ ಸ್ಕೆಚ್ ತಯಾರಿಸುವ ಕೆಲಸಕ್ಕಾಗಿ ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇಂದು ₹15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಘಟನೆ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ADLR attacks Lokayukta in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...