Home namma chikmagalur chikamagalur ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ
chikamagalurHomeLatest Newsnamma chikmagalur

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

Share
Share

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದರು.

ಕಾಫಿನಾಡ ಸ್ನೇಹಜೀವಿ ಕಲಾ ಸಂಘದಿಂದ ನಗರದ ಟಿಎಂಎಸ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಲ ಯೋಗದಲ್ಲಿ ವಿಶ್ವದಾಖಲೆಯ ಸಾಧನೆ ಮಾಡಿರುವ ವಕೀಲ ವಿ.ಕೆ.ರಘು ಅವರಿಗೆ ಸನ್ಮಾನ ಮತ್ತು ಜಾನಪದ ಮತ್ತು ಭಾವಗೀತೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಕೀಲ ವಿ.ಕೆ.ರಘು ಅನೇಕ ಸಾಂಸ್ಕೃತಿಕ ಚಟುವಟಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಿದ್ದಾರೆ ಎಂದು ಹೇಳಿದರು.

ಸಾಧಕ ವಿ.ಕೆ ರಘು ಅವರನ್ನು ಸನ್ಮಾನಿಸದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರುತ್ತೇನೆ. ಲೋಪಕ್ಕಾಗಿ ವಿಷಾಧಿಸುತ್ತೇನೆ. ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಿಜವಾಗಿಯೂ ಅರ್ಹರಿದ್ದಾರೆ. ಖಂಡಿತವಾಗಿ ನಾನು ಶಿಫಾರಸ್ಸು ಮಾಡುತ್ತೇನೆ ಎಂದರು.

ಯೋಗ್ಯರು ಮುಂದೆ ಬರಬೇಕು ಎಂದರೆ ಸಾಮಾನ್ಯದ ಸಂಗತಿಯಲ್ಲ. ಅಂತಹ ಯೋಗ್ಯತೆ ಗಳಿಸಿರುವ ರಘು ನೀರಿನಲ್ಲೇ ಯೋಗ ಮಾಡಿ ೨೩ ನಿಮಿಷದಲ್ಲಿ ೯೬೦ ಬಾರಿ ಶ್ರೀರಾಮನ ನಾಮ ಜಪ ಮಾಡಿ ಆ ಮೂಲಕ ವಿಶ್ವ ದಾಖಲೆ ಮಾಡಿರುವುದು ಅಪರೂಪದ ಸಂಗತಿ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜಶೆಟ್ಟಿ ಮಾತನಾಡಿ, ವಿ.ಕೆ. ರಘು ಅವರ ಶ್ರಮಕ್ಕೆ ಸರಿಯಾದ ಸ್ಪಂದನೆ ಸಾರ್ವಜನಿಕ ವಲಯದಿಂದ ಸಿಗಬೇಕು. ಸತತವಾದ ಪರಿಶ್ರಮದಿಂದ ಏನಾದರೂ ಸಾಧಿಸಬಹುದು ಎಂಬುದನ್ನು ಇವತ್ತಿನ ಯುವ ಪೀಳಿಗೆಗೆ ವಿ.ಕೆ.ರಘು ತೋರಿಸಿಕೊಟ್ಟಿದ್ದಾರೆ ಎಂದರು. ಯೋಗಕ್ಕೆ ನಮ್ಮ ದೇಶದಲ್ಲಿ ಬಹಳ ಮಹತ್ವವಿದೆ. ಪ್ರಧಾನಿ ಮೋದಿ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ ಎಂದು ಹೇಳಿದರು.

ಜಯಕರ್ನಾಟಕ ಸಂಘಟನೆಯ ಸ್ಥಾಪಕ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ವಿಶ್ವದಾಖಲೆ ಮಾಡಿರುವ ವಿ.ಕೆ. ರಘು ಅವರನ್ನು ಜಿಲ್ಲಾಡಳಿತ ಕರೆದು ಗೌರವಿಸುವ ಕೆಲಸ ಮಾಡಬೇಕಿತ್ತು. ಆದರೆ, ಜಿಲ್ಲಾಡಳಿತ ಅಥವಾ ಜನ ಪ್ರತಿನಿಧಿಗಳು ಗೌರವಿಸಿಲ್ಲ. ಇಲ್ಲಿ ಕಲೆಗೆ ಬೆಲೆ ನೀಡುತ್ತಿಲ್ಲ ಎಂಬುದೇ ಬೇಸರದ ಸಂಗತಿ ಎಂದರು.

ಗೌರವ ಸ್ವೀಕರಿಸಿದ ವಿ.ಕೆ ರಘು ಮಾತನಾಡಿ, ಯೋಗವನ್ನು ಎಲ್ಲರೂ ಮಾಡಬೇಕು. ಪಾಶ್ಚಾತ್ಯ ಜೀವನದಲ್ಲಿ ಆರೋಗ್ಯದ ಕಡೆ ಗಮನ ನೀಡಿ, ಯೋಗ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಕಲಾವಿದ ಸ್ವಾಮಿ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕುಮಾರಿ ಈಶ್ವರೀಯ ವಿವಿ ಭಾಗ್ಯ, ಬಿಜೆಪಿ ಮುಖಂಡರಾದ ವೆಂಕಟೇಶ್, ಪ್ರೇಂಕುಮಾರ್, ವಿಭಾ, ವಿನೋದ್ ಬೊಗಸೆ, ಡಾ.ಗೌರಿ, ಕಾರ್ಯಕ್ರಮ ಆಯೋಜಕರಾದ ಕಾಫಿನಾಡು ಸ್ನೇಹಜೀವಿ ಕಲಾ ತಂಡದ ಪದಾಧಿಕಾರಿಗಳು, ಸದಸ್ಯರು, ನಿರೂಪಕ ವಿರೂಪಾಕ್ಷ, ಸಿನಿಮಾ ಕ್ಷೇತ್ರದ ಜೋಗಲಾ ಸಿದ್ದರಾಜು, ವಾಣಿಚಂದ್ರಯ್ಯ ನಾಯ್ಡು ಮತ್ತಿತರರಿದ್ದರು.

Advocate V.K. Raghu inspires those who practice Sadhana Yoga

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...