Home namma chikmagalur ಬಡಾವಣೆಗಳ ಸಮಸ್ಯೆ ಪರಿಹರಿಸುವ ಪ್ರಯತ್ನಕ್ಕೆ ಸದಾಸಿದ್ಧ
namma chikmagalurchikamagalurHomeLatest News

ಬಡಾವಣೆಗಳ ಸಮಸ್ಯೆ ಪರಿಹರಿಸುವ ಪ್ರಯತ್ನಕ್ಕೆ ಸದಾಸಿದ್ಧ

Share
Share

ಚಿಕ್ಕಮಗಳೂರು:  ನಾಡು ನುಡಿ ವಿಚಾರದಲ್ಲಿ ಅನ್ಯಾಯವಾದಾಗ ಹೋರಾಟ ರೂಪಿಸುವ ಜೊತೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯದಲ್ಲಿ ಸಂಘಟನೆ ನಿರತವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಹೇಳಿದರು.

ನಗರದ ಇಂದಿರಾಗಾಂಧಿ ಬಡಾವಣೆಯಲ್ಲಿ ಕನ್ನಡಸೇನೆ ವತಿಯಿಂದ ಹಮ್ಮಿಕೊಂಡಿದ್ಧ ಸಾರ್ವಜನಿಕರ ಕುಂದುಕೊರತೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಬಡಾವಣೆಗಳಲ್ಲಿ ನಿವಾಸಿಗಳು ಮೂಲಸೌಕರ್ಯದ ಸಮಸ್ಯೆ ಬಗ್ಗೆ ಮುಕ್ತವಾಗಿ ಹಂಚಿಕೊಂಡಲ್ಲಿ ಜನಪ್ರ ತಿನಿಧಿಗಳು, ನಗರಸಭಾ ಆಡಳಿತದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾ ಗಲು ಸಾಧ್ಯವಾಗಲಿದೆ ಎಂದು ಹೇಳಿದರು.

ಪ್ರಸ್ತುತ ವಾರ್ಡಿನಲ್ಲಿ ನಿವಾಸಿಗಳ ಹೇಳಿಕೆ ಪ್ರಕಾರ ದೇವಾಲಯ, ಸಮುದಾಯ ಭವನ ನಿರ್ಮಾಣ, ಗುಣಮಟ್ಟದ ರಸ್ತೆ, ಚರಂಡಿ ಹಾಗೂ ನೀರಿನ ಸೌಲಭ್ಯದ ಅವಶ್ಯಕತೆಯಿದೆ. ಈ ಎಲ್ಲಾ ಸಮಸ್ಯೆಗಳಿಗೆ ಕನ್ನಡ ಸೇನೆ ಬೆನ್ನುಲುಬಾಗಿ ನಿಲ್ಲುವ ಮೂಲಕ ಸೌಕರ್ಯಕ್ಕೆ ಪೂರೈಸಲು ಹೋರಾಟ ನಡೆಸಲಿದೆ ಎಂದರು.

ಸಂಘಟನೆ ಕೇವಲ ಹೋರಾಟ, ಪ್ರತಿಭಟನೆಗೆ ಸೀಮಿತವಾಗದೇ ಸಮಾಜದ ನಾಗರೀಕರಿಗೆ ನೆರವಾಗು ವ ಕಾರ್ಯದಲ್ಲಿ ಸದಾಸಿದ್ಧರಿದ್ದೇವೆ. ಮುಂದಿನ ದಿನಗಳಲ್ಲಿ ನಗರದ ಪ್ರತಿ ವಾರ್ಡಿಗಳಲ್ಲೂ ಕುಂದುಕೊರತೆ ಸಭೆ ನಡೆಸುವ ಮೂಲಕ ನಿವಾಸಿಗಳ ಅಹವಾಲನ್ನು ಸ್ವೀಕರಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾ ಡುತ್ತೇವೆ ಎಂದು ತಿಳಿಸಿದರು.

ಗ್ರಾಮಾಂತರ ಠಾಣೆ ಸಬ್‌ಇನ್ಸ್‌ಪೆಕ್ಟರ್ ರಾಜೇಶ್ ಮಾತನಾಡಿ ಸಮಾಜದಲ್ಲಿ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಲು ಎಲ್ಲರಿಗೂ ಕಾನೂನಿನ ಅರಿವು ಅಗತ್ಯ. ದೈನಂದಿನ ವ್ಯವಹಾರದಲ್ಲಿ ಕಾನೂನಿನ ಚೌಕಟ್ಟಿ ನಲ್ಲಿ ವ್ಯವಹಾರ ನಡೆಸುವ ಮೂಲಕ ಮೋಸ, ವಂಚನೆಗಳಿಂದ ಮುಕ್ತ ಪಡೆಯಲು ಕಾಯ್ದೆಗಳ ಅರಿವು ಪಡೆ ದಿರಬೇಕು ಎಂದರು.

ಕಾನೂನು ವ್ಯವಸ್ಥೆ ಸಮತಟ್ಟಾಗಿ ಕಾಪಾಡಲು ಸಾರ್ವಜನಿಕರ ಸಹಕಾರವು ಅತಿಮುಖ್ಯ. ಬಡಾವಣೆಗ ಳಲ್ಲಿ ಅನೈತಿಕ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸರಿಗೆ ತಿಳಿಸಿದರೆ, ಮಾಹಿತಿ ನೀಡುವವರ ಹೆಸರನ್ನು ಗುಪ್ತವಾಗಿರಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಸಂಘದ ಅಧ್ಯಕ್ಷ ಜಯಪ್ರಕಾಶ್, ವಕ್ತಾರ ಹುಣಸೇಮಕ್ಕಿ ಲ ಕ್ಷ್ಮಣ್, ಮುಖಂಡರುಗಳಾದ ಸತೀಶ್, ಶಂಕರೇಗೌಡ, ರವಿ, ರಮೇಶ್, ಚೈತ್ರ, ನಿವಾಸಿಗಳಾದ ಕುಮಾರ್, ಮಾದೇವು, ವೆಂಕಟೇಶ್, ರಾಮು ಮತ್ತಿತರರು ಉಪಸ್ಥಿತರಿದ್ದರು.

Always ready to try to solve the problems of the settlements

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...